ADVERTISEMENT

ಮೈಸೂರು | ಬಾಂಬ್ ಬೆದರಿಕೆ: ಕೋರ್ಟ್ ಆವರಣದಲ್ಲಿ ತಪಾಸಣೆ

​ಪ್ರಜಾವಾಣಿ ವಾರ್ತೆ
Published 6 ಜನವರಿ 2026, 5:44 IST
Last Updated 6 ಜನವರಿ 2026, 5:44 IST
   

ಮೈಸೂರು: ಇಲ್ಲಿನ ಜಿಲ್ಲಾ ನ್ಯಾಯಾಲಯದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಬಂದಿದ್ದು, ಪೊಲೀಸ್ ಇಲಾಖೆ ಸಿಬ್ಬಂದಿ ತಪಾಸಣೆ‌ ನಡೆಸುತ್ತಿದ್ದಾರೆ.

ಬಾಂಬ್ ಇಟ್ಟಿರುವುದಾಗಿ ಕರೆ, ಇ-ಮೇಲ್ ಮೂಲಕ ಸಂದೇಶ ಬಂದಿದ್ದು, ಮಧ್ಯಾಹ್ನ 1.45ಕ್ಕೆ ಬಾಂಬ್ ಸಿಡಿಸುತ್ತೇವೆ ಎಂದು ತಿಳಿಸಲಾಗಿದೆ. ಬೆದರಿಕೆ ಕರೆ ಬಂದ ತಕ್ಷಣ ಎಲ್ಲರನ್ನೂ ನ್ಯಾಯಾಲಯದ ಆವರಣದಿಂದ ಹೊರ ಕಳಿಸಿ ತಪಾಸಣೆ ನಡೆಸಲಾಗುತ್ತಿದೆ. ಬಾಂಬ್ ನಿಷ್ಕ್ರೀಯ ದಳ, ಶ್ವಾನ ದಳ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT