ಎಚ್.ಡಿ.ಕೋಟೆ: ತಾಲ್ಲೂಕಿನ ಗುಂಡತ್ತೂರು ಗ್ರಾಮದಲ್ಲಿ ಬುಧವಾರ ಸಂಜೆ ಜಮೀನು ಹಂಚಿಕೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಅಣ್ಣ ಚಲುವರಾಜು ಅವರ ಕಾಲಿಗೆ ತಮ್ಮ ಅಭಿಷೇಕ್ ಎಂಬುವರು ಬಂದೂಕಿನಿಂದ ಗುಂಡು ಹಾರಿಸಿದ್ದಾರೆ.
ಚಲುವರಾಜು ಅವರನ್ನು ಗ್ರಾಮಸ್ಥರು ಸ್ಥಳೀಯ ಆಸ್ಪತ್ರೆಗೆ ಸಾಗಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದು, ನಂತರ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅಂತರಸಂತೆ ಪೊಲೀಸ್ ಠಾಣೆ ಪಿಎಸ್‌ಐ ಚಂದ್ರಹಾಸ್ ನಾಯಕ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಅಭಿಷೇಕ್ ಅವರನ್ನು ಬಂಧಿಸಿದ್ದಾರೆ.
ಅಂತರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.