ADVERTISEMENT

ನೆರವಿಗೆ ಆಗ್ರಹಿಸಿ ಕಟ್ಟಡ ಕಾರ್ಮಿಕರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2021, 3:14 IST
Last Updated 3 ಜುಲೈ 2021, 3:14 IST
ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಕಟ್ಟಡ ಕಾರ್ಮಿಕರು ಪ್ರತಿಭಟನೆ ನಡೆಸಿದರು
ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಕಟ್ಟಡ ಕಾರ್ಮಿಕರು ಪ್ರತಿಭಟನೆ ನಡೆಸಿದರು   

ಮೈಸೂರು: ಕೋವಿಡ್‌ ಪರಿಹಾರ ಧನವಾಗಿ ಕಟ್ಟಡ ಕಾರ್ಮಿಕರಿಗೆ ಮೂರು ತಿಂಗಳವರೆಗೆ ₹ 10 ಸಾವಿರ ನೀಡಬೇಕು ಎಂದು ಒತ್ತಾಯಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಸೇರಿದ ಪ್ರತಿಭಟನಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಸರ್ಕಾರ ಈಗಾಗಲೇ ಘೋಷಿಸಿರುವ ₹ 3 ಸಾವಿರ ಪರಿಹಾರ ಧನವು ಕಟ್ಟಡ ಕಾರ್ಮಿಕರ ಖಾತೆಗಳಿಗೆ ಬಂದಿಲ್ಲ. ವಿವಿಧ ಪರಿಹಾರಕ್ಕಾಗಿ ಸಲ್ಲಿಸಿದ ಅರ್ಜಿಗಳು ಇನ್ನೂ ವಿಲೇವಾರಿಯಾಗಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ವಿತರಿಸಲಾಗುತ್ತಿರುವ ಪಡಿತರ ಕಿಟ್‌ಗಳಲ್ಲಿ ಗುಣಮಟ್ಟ ಇಲ್ಲದ ಆಹಾರ ಪದಾರ್ಥಗಳಿವೆ. ಸರ್ಕಾರ ಈ ಕುರಿತು ನಿಷ್ಪಕ್ಷಪಾತವಾದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಎಐಯುಟಿಯುಸಿ ಸಂಘಟನೆಯ ಜಿಲ್ಲಾ ಜಂಟಿ ಕಾರ್ಯದರ್ಶಿ ಮುದ್ದುಕೃಷ್ಣ, ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘದ ಸಂಚಾಲಕ ಪಿ.ರಾಜು ಪ್ರತಿಭಟನೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.