ADVERTISEMENT

ಬುಲೆಟ್ ನಾಪತ್ತೆ; ಉನ್ನತ ಮಟ್ಟದ ತನಿಖೆಗೆ ಆದೇಶ

​ಪ್ರಜಾವಾಣಿ ವಾರ್ತೆ
Published 2 ಜೂನ್ 2020, 16:40 IST
Last Updated 2 ಜೂನ್ 2020, 16:40 IST

ಮೈಸೂರು: ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ 50 ಬುಲೆಟ್‌ಗಳು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತಮಟ್ಟದ ತನಿಖೆಗೆ ಆದೇಶಿಸಲಾಗಿದೆ.

ಜಿಲ್ಲಾ ಸಶಸ್ತ್ರ ಮೀಸಲು ದಳದವರು ತಪಾಸಣೆ ನಡೆಸುವಾಗ 50 ಬುಲೆಟ್‌ಗಳು ಕಡಿಮೆ ಇರುವುದು ಪತ್ತೆಯಾದ ನಂತರ ಈ ಕುರಿತು ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸದ್ಯ, ನಂಜನಗೂಡು ಡಿವೈಎಸ್‌ಪಿ ಅವರಿಗೆ ತನಿಖೆಯ ಹೊಣೆ ನೀಡಲಾಗಿದೆ. ಪ್ರಾಥಮಿಕ ಹಂತದಲ್ಲಿ ಸಬ್‌ಇನ್‌ಸ್ಪೆಕ್ಟರ್ ಹಾಗೂ ರೈಟರ್‌ ಅವರ ಹೇಳಿಕೆ ಪಡೆಯಲಾಗಿದೆ. ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.