ADVERTISEMENT

ಹುಣಸೂರು | ಸರ್ಕಾರಿ ಬಸ್ಸಿಗೆ ಕಾರು ಡಿಕ್ಕಿ; ದಂಪತಿ ಸಾವು

​ಪ್ರಜಾವಾಣಿ ವಾರ್ತೆ
Published 1 ಜುಲೈ 2023, 15:52 IST
Last Updated 1 ಜುಲೈ 2023, 15:52 IST
ಹುಣಸೂರು ತಾಲ್ಲೂಕಿನ ರಂಗಯ್ಯನಕೊಪ್ಪಲು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಶನಿವಾರ ಮಧ್ಯಾಹ್ನ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ದಂಪತಿ ಸಾವನ್ನಪ್ಪಿದ್ದಾರೆ.
ಹುಣಸೂರು ತಾಲ್ಲೂಕಿನ ರಂಗಯ್ಯನಕೊಪ್ಪಲು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಶನಿವಾರ ಮಧ್ಯಾಹ್ನ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ದಂಪತಿ ಸಾವನ್ನಪ್ಪಿದ್ದಾರೆ.   

ಹುಣಸೂರು: ತಾಲ್ಲೂಕಿನ ರಂಗಯ್ಯನ ಕೊಪ್ಪಲು ಗ್ರಾಮದ ಬಳಿ ಶನಿವಾರ ಸಂಜೆ ಕಾರು ಮತ್ತು ಸರ್ಕಾರಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ವಿರಾಜಪೇಟೆಯ ನಿವೃತ್ತ ಪ್ರಾಂಶುಪಾಲ ಬೆಳ್ಳಿಯಪ್ಪ(64), ಪತ್ನಿ ವೀಣಾ (54) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೊಡಗು ಜಿಲ್ಲೆಯ ಬಿಎಸ್ಪಿ ಜಿಲ್ಲಾ ಉಪಾಧ್ಯಕ್ಷರಾಗಿ ಸಾರ್ವಜನಿಕ ಜೀವನದಲ್ಲಿದ್ದ ಬೆಳ್ಳಿಯಪ್ಪ, ಪತ್ನಿ ವೀಣಾ ಅವರು ಮೈಸೂರಿನಿಂದ ಹುಣಸೂರಿಗೆ ಬರುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಬಸ್ ಕಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ದಂಪತಿ ಪುತ್ರಿ ಹೈದರಬಾದಿನಿಂದ ಮೈಸೂರಿಗೆ ವಿಮಾನ ನಿಲ್ದಾಣಕ್ಕೆ ಬಂದ ಸಂದರ್ಭದಲ್ಲಿ ಆಕೆಯನ್ನು ಮನೆಗೆ ಕರೆದೊಯ್ಯಲು ಕೊಡಗಿನಿಂದ ಮೈಸೂರಿನ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು ಎಂದು ಕುಟುಂಬದಿಂದ ತಿಳಿದು ಬಂದಿದೆ.

ADVERTISEMENT

ಮೃತರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಒಬ್ಬರು ಹೈದರಾಬಾದ್ ಮೂಲದ ಐಟಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಮತ್ತೊಬ್ಬರು ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಸ್ಥಳಕ್ಕೆ ಬಿಳಿಕೆರೆ ಪೊಲೀಸ್ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಚಿಕ್ಕಸ್ವಾಮಿ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

ಬಿಎಸ್ಪಿ ಪಕ್ಷದ ಜಿಲ್ಲಾಧ್ಯಕ್ಷ ಬೆಳ್ಳಿಯಪ್ಪ, ವೀಣಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.