ನಂಜನಗೂಡು: ನಗರದ ಸುಜಾತಪುರಂ ಮೇಲ್ಸೇತುವೆಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಬೈಕ್‍ಗೆ ಡಿಕ್ಕಿ ಹೊಡೆದಿದ್ದರಿಂದ ಬೈಕ್ ಸವಾರ ಕೇರಳದ ಮಲ್ಲಪ್ಪುರಂ ನಿವಾಸಿ ಶರತ್ ಪ್ರಕಾಶ್ (24) ಸ್ಥಳದಲ್ಲೇ ಮೃತಪಟ್ಟರು. ಹಿಂಬಂದಿ ಸವಾರ ಜುಲಿಯದ್ ಅಯೂಬ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಂಗಳೂರಿನ ಆಚಾರ್ಯ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಶರತ್ ಪ್ರಕಾಶ್ ಮತ್ತು ಜುಲಿಯದ್ ಅಯೂಬ್ ಭಾನುವಾರ ಕೇರಳದಿಂದ ಬೆಂಗಳೂರಿಗೆ ರಾಯಲ್ ಎನ್‍ಫೀಲ್ಡ್ ಬೈಕ್‍ನಲ್ಲಿ ಬರುವಾಗ ಗುಂಡ್ಲುಪೇಟೆ ಕಡೆಯಿಂದ ಬಂದ ಕೆಎಸ್‍ಆರ್‌ಟಿಸಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆಯಿತು, ಶರತ್‍ಪ್ರಕಾಶ್ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟರು. ಹಿಂಬದಿ ಸವಾರ ಜುಲಿಯದ್ ಅಯೂಬ್ ಗಂಭೀರವಾಗಿ ಗಾಯಗೊಂಡರು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.
ನಗರ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿ 40 ನಿಮಿಷ ಕಳೆದರೂ ಸ್ಥಳಕ್ಕೆ ಆ್ಯಂಬುಲೆನ್ಸ್ ಬರದಿದ್ದರಿಂದ ತುರ್ತು ಚಿಕಿತ್ಸೆ ಲಭ್ಯವಾಗದೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳಕ್ಕೆ ಸಂಚಾರ ಪೊಲೀಸ್ ಠಾಣೆಯ ಪಿಎಸೈ ಸಿದ್ದರಾಜು ಭೇಟಿ ನೀಡಿ ಮಹಜರು ನಡೆಸಿದರು.
ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.