ADVERTISEMENT

ಸಮಯಕ್ಕೆ ಬಾರದ ಬಸ್; ಮನೆಗೆ ಮರಳಿದ ವಿದ್ಯಾರ್ಥಿಗಳು

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2024, 15:57 IST
Last Updated 9 ಆಗಸ್ಟ್ 2024, 15:57 IST
ಜಯಪುರ ಬಸ್ ನಿಲ್ದಾಣದಲ್ಲಿ ನೂಕು ನುಗ್ಗಲಿನಲ್ಲಿ ಬಸ್ ಹತ್ತಲು ಯತ್ನಿಸುತ್ತಿರುವ ವಿದ್ಯಾರ್ಥಿಗಳು.
ಜಯಪುರ ಬಸ್ ನಿಲ್ದಾಣದಲ್ಲಿ ನೂಕು ನುಗ್ಗಲಿನಲ್ಲಿ ಬಸ್ ಹತ್ತಲು ಯತ್ನಿಸುತ್ತಿರುವ ವಿದ್ಯಾರ್ಥಿಗಳು.   

ಜಯಪುರ: ಇಲ್ಲಿನ ಬಸ್ ನಿಲ್ದಾಣದಲ್ಲಿ ಶುಕ್ರವಾರ ಬೆಳಿಗ್ಗೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸಿದರು. ವಿದ್ಯಾರ್ಥಿಗಳು ನೂಕು ನುಗ್ಗಲಿನಲ್ಲಿ ಬಸ್ ಹತ್ತಲು ಪ್ರಯತ್ನಿಸಿದರು. ಕೆಲವರು ವಾಪಸ್ಸು ಮನೆಗೆ ಮರಳಿದರು.

ಹಲವು ಪೋಷಕರು ತಮ್ಮ ಬೈಕ್‌ಗಳಲ್ಲಿ ವಿದ್ಯಾರ್ಥಿಗಳನ್ನು ಶಾಲಾ ಕಾಲೇಜಿಗೆ ಬಿಟ್ಟು ಬಂದರು. ಮಾವಿನಹಳ್ಳಿ, ಗುಮಚನಹಳ್ಳಿ, ಬೆಟ್ಟದಬಿಡು ಗ್ರಾಮಗಳಿಂದ ವಿದ್ಯಾರ್ಥಿಗಳು ನಡೆದುಕೊಂಡೆ ಶಾಲೆಗೆ ಬಂದರು. ಎಚ್.ಡಿ ಕೋಟೆ ಕಡೆಯಿಂದ ಜಯಪುರ ಮಾರ್ಗವಾಗಿ ಮೈಸೂರಿಗೆ ತೆರಳುವ ಬಸ್‌ಗಳಲ್ಲಿ ನಿಲ್ಲಲು ಜಾಗವಿಲ್ಲದಷ್ಟು ಪ್ರಯಾಣಿಕರಿಂದ ತುಂಬಿಕೊಂಡಿದ್ದವು. ಹಲವರು ಬಸ್ ಬಾಗಿಲಲ್ಲಿಯೇ ನೇತಾಡಿಕೊಂಡು ಪ್ರಯಾಣಿಸಿದರು.

ಕಾಂಗ್ರೆಸ್ ಜನಾಂದೋಲನ ಸಮಾವೇಶ ಪರಿಣಾಮ ಕೆಎಸ್ಆರ್‌ಟಿಸಿ ಬಸ್‌ಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.