ADVERTISEMENT

ಮೈಸೂರಿನಲ್ಲಿ ಬಿಗಿ ಭದ್ರತೆಯಲ್ಲಿ ಬಸ್ ಸಂಚಾರ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2020, 6:48 IST
Last Updated 14 ಡಿಸೆಂಬರ್ 2020, 6:48 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಮೈಸೂರು: ನಗರದಲ್ಲಿ ಬಸ್ ಸಂಚಾರ ಭಾನುವಾರ ರಾತ್ರಿಯಿಂದಲೆ ಆರಂಭವಾಗಿದೆ. ಸೋಮವಾರ ಬೆಳಿಗ್ಗೆ 10 ಗಂಟೆಯವರೆಗೆ 10 ಬಸ್ ಗಳು ಸಂಚಾರ ನಡೆಸಿವೆ. ನಗರ ಸಾರಿಗೆ ವಿಭಾಗದಿಂದ 22 ಬಸ್ ಗಳು ಹೊರಟಿವೆ.

ಕೆಎಸ್ಆರ್ ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಯೂನಿಯನ್ ಗೆ ಸೇರಿದ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಒಕ್ಕೂಟದ ನೌಕರರು ಸಭೆ ಸೇರಿದ್ದು, ಚರ್ಚೆ ನಡೆಸುತ್ತಿದ್ದಾರೆ. ಇನ್ನೂ ಕರ್ತವ್ಯಕ್ಕೆ ಹಾಜರಾಗುವ ಕುರಿತು ಅಂತಿಮ ತೀರ್ಮಾನ ಕೈಗೊಂಡಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.