ADVERTISEMENT

ಕ್ಯಾನ್ಸರ್ ಮುಕ್ತ ಬದುಕಿನ ಗುರಿ: ರಾಮದಾಸ್ ಸಲಹೆ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2023, 15:28 IST
Last Updated 4 ಫೆಬ್ರುವರಿ 2023, 15:28 IST
ಕೆ.ಆರ್.ಕ್ಷೇತ್ರ ವ್ಯಾಪ್ತಿಯ ನಂಜುಮಳಿಗೆಯಲ್ಲಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬಳಿಯ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಕ್ಯಾನ್ಸರ್ ಅರಿವು ಶಿಬಿರ
ಕೆ.ಆರ್.ಕ್ಷೇತ್ರ ವ್ಯಾಪ್ತಿಯ ನಂಜುಮಳಿಗೆಯಲ್ಲಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬಳಿಯ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಕ್ಯಾನ್ಸರ್ ಅರಿವು ಶಿಬಿರ   

ಮೈಸೂರು: ‘ಕ್ಯಾನ್ಸರ್ ಎಂಬ ಮಹಾಮಾರಿ ಸಾಮಾನ್ಯ ಎಂಬ ಮನಸ್ಥಿತಿಯಲ್ಲಿರುವ ನಾವು, ಅದರ ವಿರುದ್ಧ ಹೋರಾಡುವ ಅನಿವಾರ್ಯವಿದೆ’ ಎಂದು ಶಾಸಕ ರಾಮದಾಸ್ ತಿಳಿಸಿದರು.

ಕೆ.ಆರ್.ಕ್ಷೇತ್ರ ವ್ಯಾಪ್ತಿಯ ನಂಜುಮಳಿಗೆಯಲ್ಲಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬಳಿಯ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಕ್ಯಾನ್ಸರ್ ಅರಿವು ಶಿಬಿರ, ಸರ್ಕಾರಿ ಸವಲತ್ತುಗಳ ಅದಾಲತ್, ಆಧಾರ್ ಕಾರ್ಡ್ ನವೀಕರಣ, ವಾರ್ಡ್ ಸಮಸ್ಯೆ ಮತ್ತು ಪರಿಹಾರ, ಮಧುಮೇಹ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಕ್ಯಾನ್ಸರ್ ಬಗ್ಗೆ ಪ್ರತಿಯೊಬ್ಬರೂ ಅರಿವು ಹೊಂದಬೇಕು. ಈ ರೋಗ ಮುಕ್ತ ಬದುಕಿನ ಗುರಿ ಎಲ್ಲರದಾಗಬೇಕು’ ಎಂದರು.

ADVERTISEMENT

‘ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಎಲ್ಲಾ ಬೋರ್‌ವೆಲ್‌ಗಳನ್ನು ತೆರವುಗೊಳಿಸಲಾಗುತ್ತಿದೆ. ಇಡೀ ಕ್ಷೇತ್ರದಲ್ಲಿ ಕೆಲವೇ ದಿನಗಳಲ್ಲಿ ಶೇ 100ರಷ್ಟು ಪ್ರಮಾಣದಲ್ಲಿ ಕಾವೇರಿ ಹಾಗೂ ಕಪಿಲಾ ನದಿಯಿಂದ ನೀರು ಕೊಡಲಾಗುತ್ತಿದೆ’ ಎಂದು ಹೇಳಿದರು.

ತುಳಸಿದಾಸ್ ದಾಸಪ್ಪ ಆಸ್ಪತ್ರೆಯಲ್ಲಿ ಶುಕ್ರವಾರ ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾದವರಿಗೆ ಕನ್ನಡಕಗಳನ್ನು ಉಚಿತವಾಗಿ ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.