
ಪ್ರಜಾವಾಣಿ ವಾರ್ತೆ
ಆಸ್ಪತ್ರೆ –(ಪ್ರಾತಿನಿಧಿಕ ಚಿತ್ರ)
ಮೈಸೂರು: ನಗರದ ನಯನ ಕುಮಾರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 1 ವರ್ಷದಿಂದ ಹೊಟ್ಟೆ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ರೋಗಿಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ರೋಗಿಯು ಚೇತರಿಸಿಕೊಳ್ಳುತ್ತಿದ್ದಾರೆ.
‘ಅನೇಕ ಆಸ್ಪತ್ರೆಗಳಿಗೆ ಹೋಗಿದ್ದ ರೋಗಿಯು ಚಿಕಿತ್ಸೆಯ ದುಬಾರಿ ಶುಲ್ಕದ ಕಾರಣ ಆತಂಕಕ್ಕೆ ಒಳಗಾಗಿದ್ದರು. ನಯನ ಕುಮಾರ್ ಆಸ್ಪತ್ರೆಯು ಸೇವಾಮನೋಭಾವ ಉದ್ದೇಶದಿಂದ ಅತೀ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡಿದ್ದು, ಶಸ್ತ್ರವೈದ್ಯ ಡಿ.ಕೆ.ದಿಲೀಪ್ ಹಾಗೂ ತಂಡವು 7 ರಿಂದ 8 ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಿದ್ದರು’ ಎಂದು ಆಸ್ಪತ್ರೆ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.