ADVERTISEMENT

ಮೈಸೂರು ದಸರಾ: ಫಿರಂಗಿ ಗಾಡಿಗೆ ಪೂಜೆ; ತಾಲೀಮಿಗೆ ಚಾಲನೆ

ಅರಮನೆ ಸಮೀಪವೇ ಗಜಪಡೆ, ಅಶ್ವಪಡೆಗೆ ತಾಲೀಮು ನೀಡಲು ಚಿಂತನೆ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2020, 13:32 IST
Last Updated 4 ಅಕ್ಟೋಬರ್ 2020, 13:32 IST
ಮೈಸೂರು ಅರಮನೆಯಲ್ಲಿ ಭಾನುವಾರ ಫಿರಂಗಿ ಗಾಡಿಗಳಿಗೆ ಪೂಜೆ ನೆರವೇರಿಸಲಾಯಿತು. ಪೊಲೀಸ್‌ ಕಮಿಷನರ್‌ ಡಾ.ಚಂದ್ರಗುಪ್ತ, ಡಿಸಿಪಿಗಳಾದ ಡಾ.ಎ.ಎನ್‌.ಪ್ರಕಾಶ್‌ ಗೌಡ, ಗೀತಾ ಪ್ರಸನ್ನ ಇದ್ದಾರೆ
ಮೈಸೂರು ಅರಮನೆಯಲ್ಲಿ ಭಾನುವಾರ ಫಿರಂಗಿ ಗಾಡಿಗಳಿಗೆ ಪೂಜೆ ನೆರವೇರಿಸಲಾಯಿತು. ಪೊಲೀಸ್‌ ಕಮಿಷನರ್‌ ಡಾ.ಚಂದ್ರಗುಪ್ತ, ಡಿಸಿಪಿಗಳಾದ ಡಾ.ಎ.ಎನ್‌.ಪ್ರಕಾಶ್‌ ಗೌಡ, ಗೀತಾ ಪ್ರಸನ್ನ ಇದ್ದಾರೆ   

ಮೈಸೂರು: ದಸರಾ ಮಹೋತ್ಸವ ಅಂಗವಾಗಿ ಕುಶಾಲತೋಪು ಸಿಡಿಸುವ ತಾಲೀಮು ನಡೆಸಲು ಫಿರಂಗಿ ಗಾಡಿಗಳಿಗೆ ಭಾನುವಾರ ಅರಮನೆ ಆವರಣದಲ್ಲಿ ಪೂಜೆ ಸಲ್ಲಿಸಲಾಯಿತು.

11 ಫಿರಂಗಿ ಗಾಡಿಗಳಿಗೆ ಪೊಲೀಸ್ ಕಮಿಷನರ್‌ ಡಾ.ಚಂದ್ರಗುಪ್ತ ನೇತೃತ್ವದಲ್ಲಿ ನಗರ ಸಶಸ್ತ್ರ ಮೀಸಲು ಪಡೆಯ ಪೊಲೀಸರು ಸಾಂಪ್ರದಾಯಿಕವಾಗಿ ಕುಂಬಳಕಾಯಿ ಒಡೆಯುವ ಮೂಲಕ ಪೂಜೆ ಸಲ್ಲಿಸಿದರು. ಈ ಮೂಲಕ ತಾಲೀಮಿಗೆ ಚಾಲನೆ ನೀಡಲಾಯಿತು.

ಕೆಲ ದಿನಗಳ ಬಳಿಕ ಆನೆಗಳು, ಕುದುರೆಗಳ ಸಮ್ಮುಖದಲ್ಲಿ ಸಿಡಿಮದ್ದು ಸಿಡಿಸಿ ತಾಲೀಮು ನೀಡಲಾಗುತ್ತದೆ.20ಕ್ಕೂ ಅಧಿಕ ಸಿಬ್ಬಂದಿ ಸಿಡಿಮದ್ದು ತಾಲೀಮಿನಲ್ಲಿ ಭಾಗವಹಿಸಲಿದ್ದಾರೆ.

ADVERTISEMENT

ವಿಜಯದಶಮಿ ದಿನದಂದು ಅರಮನೆ ಬಳಿ ಪೊಲೀಸರು 21 ಬಾರಿ ಕುಶಾಲತೋಪು ಸಿಡಿಸುವ ಮೂಲಕ ಗೌರವ ಸಲ್ಲಿಸುತ್ತಾರೆ. ಆ ಸದ್ದಿಗೆ ಆನೆ, ಕುದುರೆಗಳು ಬೆದರದೆ, ವಿಚಲಿತಗೊಳ್ಳದೆ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿ ಎಂಬ ಉದ್ದೇಶದಿಂದ ದಸರಾ ಆರಂಭಕ್ಕೂ ಮುನ್ನ ಫಿರಂಗಿಗಳ ಮೂಲಕ ಸಿಡಿಮದ್ದು ಸಿಡಿಸುವ ತಾಲೀಮು ನಡೆಸಲಾಗುತ್ತದೆ.

ಪ್ರತಿ ಬಾರಿ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ತಾಲೀಮು ನಡೆಸಲಾಗುತ್ತಿತ್ತು. ಆದರೆ, ಈ ಬಾರಿ ಆನೆಗಳನ್ನು ಹೊರಗಡೆ ಕರೆದುಕೊಂಡು ಹೋಗುವಂತಿಲ್ಲ. ಹೀಗಾಗಿ, ಅರಮನೆಗೆ ಸಮೀಪವೇ ನಡೆಸಲು ಚಿಂತಿಸಲಾಗುತ್ತಿದೆ.

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಡಾ.ಎ.ಎನ್‌.ಪ್ರಕಾಶ್‌ ಗೌಡ, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಗೀತಾ ಪ್ರಸನ್ನ ಹಾಗೂ ಪೊಲೀಸ್‌ ಇಲಾಖೆಯ ಹಲವು ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.