ಮೈಸೂರು: ತಿ.ನರಸೀಪುರ ತಾಲ್ಲೂಕಿನ ಕಿರುಗಾವಲು ರಸ್ತೆಯ ನೆರಗ್ಯಾತನಹಳ್ಳಿ ಸಮೀಪ ಬುಧವಾರ ರಾತ್ರಿ ಕಾರೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಮೂವರು ಮೃತಪಟ್ಟಿದ್ದಾರೆ.
ತಾಲ್ಲೂಕಿನ ಹಸುವಟ್ಟಿ ಗ್ರಾಮದ ಸುರೇಶ್ (23), ಕಿರಣ್ (24) ಹಾಗೂ ಮಹೇಶ್ (23) ಮೃತಪಟ್ಟವರು.
ಗ್ರಾಮದಲ್ಲಿ ನಡೆಯುತ್ತಿದ್ದ ಹಬ್ಬಕ್ಕೆ ನೆಂಟರನ್ನು ಕರೆ ತರಲೆಂದು ಇವರು ಸಮೀಪದ ಬೊಮ್ಮನಹಳ್ಳಿಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಗುದ್ದಿದೆ. ಕಾರಿನಲ್ಲಿದ್ದ ಎಲ್ಲ ಮೂವರೂ ಮೃತಪಟ್ಟಿದ್ದಾರೆ. ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.