ತಿ.ನರಸೀಪುರ: ಕಾರು ಡಿಕ್ಕಿ ಹೊಡೆದ ಪರಿಣಾಮ ವಾಯುವಿಹಾರಕ್ಕೆ ತೆರಳುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟು ಮತ್ತೊಬ್ಬರು ಗಾಯಗೊಂಡಿರುವ ಘಟನೆ ಮೈಸೂರು–ತಿ.ನರಸೀಪುರ ಮುಖ್ಯ ರಸ್ತೆ ಹಳೆ ಕೆಂಪಯ್ಯನಹುಂಡಿ ಗ್ರಾಮದ ಬಳಿ ಮಂಗಳವಾರ ಮುಂಜಾನೆ ನಡೆದಿದೆ.
ತಾಲ್ಲೂಕಿನ ಹೊಸ ಕೆಂಪಯ್ಯನಹುಂಡಿ ಗ್ರಾಮದ ರಂಗನಾಥ (34) ಎಂಬುವರೇ ಮೃತಪಟ್ಟಿದ್ದು, ನಾಗೇಂದ್ರ ಎಂಬುವರು ಗಾಯಗೊಂಡಿದ್ದಾರೆ. ಮಂಗಳವಾರ ಮುಂಜಾನೆ ನಡೆದು ಹೋಗುತ್ತಿದ್ದ ವೇಳೆ ಮೈಸೂರು ಕಡೆಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ.
ಮೃತನ ಸಹೋದರ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ತಿ.ನರಸೀಪುರ ಪಟ್ಟಣದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.