ADVERTISEMENT

ಜಾತಿ ನಿಂದನೆ: ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2025, 5:00 IST
Last Updated 18 ಅಕ್ಟೋಬರ್ 2025, 5:00 IST
   

ಎಚ್.ಡಿ.ಕೋಟೆ: ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ,ಮಹದೇವಪ್ಪ ಅವರ ಜಾತಿ ನಿಂದನೆ ಮಾಡಿದ ಆರೋಪದಲ್ಲಿ ತಾಲ್ಲೂಕಿನ ಯರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ರವಿ ಎಸ್‌.ಎಲ್. ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕುರಿತು ಟೀಕಿಸುವ ವೇಳೆ ಆರೋಪಿ ಶಿಕ್ಷಕ ಜಾತಿನಿಂದನೆ ಮಾಡಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್‌. ರಾಜು ಅವರು ಡಿಡಿಪಿಐ ಎಸ್.ಟಿ.ಜವರೇಗೌಡ ಅವರಿಗೆ ವರದಿ ನೀಡಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT