ADVERTISEMENT

ಮೈಸೂರು: ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಕಾರ್ಯ ಪರಿಶೀಲಿಸಿದ ಡಿಸಿ, ಸಿಇಒ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2025, 5:00 IST
Last Updated 29 ಸೆಪ್ಟೆಂಬರ್ 2025, 5:00 IST
ಮೈಸೂರು ತಾಲ್ಲೂಕು ವಾಜಮಂಗಲದಲ್ಲಿ ಭಾನುವಾರ ನಡೆದ ಸಮೀಕ್ಷೆಯನ್ನು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್‌ಕುಮಾರ್ ವೀಕ್ಷಿಸಿ ಮಾಹಿತಿ ಪಡೆದರು
ಮೈಸೂರು ತಾಲ್ಲೂಕು ವಾಜಮಂಗಲದಲ್ಲಿ ಭಾನುವಾರ ನಡೆದ ಸಮೀಕ್ಷೆಯನ್ನು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್‌ಕುಮಾರ್ ವೀಕ್ಷಿಸಿ ಮಾಹಿತಿ ಪಡೆದರು   

ಮೈಸೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಜಿಲ್ಲೆಯಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿವಾರು ಸಮೀಕ್ಷೆ)ಯನ್ನು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಯುಕೇಶ್‌ಕುಮಾರ್ ಭಾನುವಾರ ವೀಕ್ಷಿಸಿದರು.

ತಾಲ್ಲೂಕಿನ, ವರುಣ ವಿಧಾನಸಭಾ ಕ್ಷೇತ್ರದ ವಾಜಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾಜಮಂಗಲ, ಭುಗತಹಳ್ಳಿ ಮೊದಲಾದ ಗ್ರಾಮಗಳಿಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯವನ್ನು ಪರಿಶೀಲಿಸಿದರು. ಸಮೀಕ್ಷಕರು ಮನೆ-ಮನೆಗೆ ತೆರಳಿ ಮಾಹಿತಿಯನ್ನು ನಿಖರವಾಗಿ ದಾಖಲಿಸುತ್ತಿರುವುದನ್ನು ಗಮನಿಸಿದರು.

ಸಮೀಕ್ಷೆಯ ವೇಳೆ ಎದುರಾಗುವ ಸಮಸ್ಯೆಗಳ ಕುರಿತು ಸಮೀಕ್ಷಕರೊಂದಿಗೆ ಚರ್ಚಿಸಿದರು. ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.

ADVERTISEMENT

ಮೈಸೂರು ತಾಲ್ಲೂಕು ತಹಶೀಲ್ದಾರ್ ಮಹೇಶ್‌ಕುಮಾರ್, ತಾಲ್ಲೂಕು ‍ಪಂಚಾಯಿತಿ ಇಒ ಕೃಷ್ಣ, ಮೈಸೂರು ಗ್ರಾಮಾಂತರ ಬಿಇಒ ಪ್ರಕಾಶ್ ಪಾಲ್ಗೊಂಡಿದ್ದರು.

ಜಿಲ್ಲೆಯಲ್ಲಿ ಸಮೀಕ್ಷೆಗೆ ತಾಂತ್ರಿಕ ತೊಂದರೆ ಎದುರಾಗಿರುವುದು, ಪ್ರಗತಿ ಕುಂಟುತ್ತಿರುವ ಬಗ್ಗೆ ‘ಪ್ರಜಾವಾಣಿ’ ಸರಣಿ ವರದಿಗಳನ್ನು ಮಾಡಿ ಗಮನಸೆಳೆದಿತ್ತು. ಇದರಿಂದ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.