ADVERTISEMENT

ಕೇಂದ್ರ ಸರ್ಕಾರ ಮಾತುಕತೆಗೆ ಮುಂದಾಗಲಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2024, 16:08 IST
Last Updated 28 ಡಿಸೆಂಬರ್ 2024, 16:08 IST
ಮೈಸೂರು ಪತ್ರಕರ್ತರ ಭವನದಲ್ಲಿ ಶನಿವಾರ ಮೈಸೂರು ನಗರ ಮತ್ತು ಜಿಲ್ಲಾ ಚಿಲ್ಲರೆ ಔಷಧಿ ವ್ಯಾಪಾರಿಗಳ ಸಂಘದ ಕ್ಯಾಲೆಂಡರ್‌ ಅನ್ನು ಶಾಸಕ ದರ್ಶನ್ ಪುಟ್ಟಣ್ಣಯ್ಯ ಬಿಡುಗಡೆಗೊಳಿಸಿದರು. ಎಂ.ರಾಜು, ಎಸ್.ದೇವರಾಜು, ಸಿ.ಕೆ.ಅರುಣ್, ಮನ್ಸೂರ್ ಅಹಮದ್ ಖಾನ್, ಎಚ್.ಕೆ.ಮಂಜುನಾಥ, ವಿ.ಬಿ.ಮಹೇಶ್ ಭಾಗವಹಿಸಿದ್ದರು
ಮೈಸೂರು ಪತ್ರಕರ್ತರ ಭವನದಲ್ಲಿ ಶನಿವಾರ ಮೈಸೂರು ನಗರ ಮತ್ತು ಜಿಲ್ಲಾ ಚಿಲ್ಲರೆ ಔಷಧಿ ವ್ಯಾಪಾರಿಗಳ ಸಂಘದ ಕ್ಯಾಲೆಂಡರ್‌ ಅನ್ನು ಶಾಸಕ ದರ್ಶನ್ ಪುಟ್ಟಣ್ಣಯ್ಯ ಬಿಡುಗಡೆಗೊಳಿಸಿದರು. ಎಂ.ರಾಜು, ಎಸ್.ದೇವರಾಜು, ಸಿ.ಕೆ.ಅರುಣ್, ಮನ್ಸೂರ್ ಅಹಮದ್ ಖಾನ್, ಎಚ್.ಕೆ.ಮಂಜುನಾಥ, ವಿ.ಬಿ.ಮಹೇಶ್ ಭಾಗವಹಿಸಿದ್ದರು   

ಮೈಸೂರು: ‘ಕೇಂದ್ರ ಸರ್ಕಾರವು ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತ ಮುಖಂಡರನ್ನು ಕರೆದು ಮಾತನಾಡಿ ಸಮಸ್ಯೆ ಬಗೆಹರಿಸಬೇಕು. ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿರುವ ಜಗತ್ ಸಿಂಗ್ ದಲೈವಾಲ ಅವರಿಗೆ ತೊಂದರೆಯಾದರೆ ಕೇಂದ್ರವೇ ಹೊಣೆಯಾಗುತ್ತದೆ’ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಎಚ್ಚರಿಕೆ ನೀಡಿದರು.

ಇಲ್ಲಿನ ಪತ್ರಕರ್ತರ ಭವನದಲ್ಲಿ ಶನಿವಾರ ಮೈಸೂರು ನಗರ ಮತ್ತು ಜಿಲ್ಲಾ ಚಿಲ್ಲರೆ ಔಷಧಿ ವ್ಯಾಪಾರಿಗಳ ಸಂಘದ ಕ್ಯಾಲೆಂಡರ್‌ ಬಿಡುಗೊಳಿಸಿ, ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಉಪವಾಸ ಸ್ಥಳಕ್ಕೆ ಯಾರೊಬ್ಬರೂ ಬಂದು ಸಮಸ್ಯೆ ಏನು ಎಂದು ಕೇಳಿಲ್ಲ. ಇದು ಅತ್ಯಂತ ಖಂಡನೀಯ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸಮಸ್ಯೆ ಬಗೆಹರಿಸಲು ಮುಂದಾಗಬೇಕು’ ಎಂದು ಒತ್ತಾಯಿಸಿದರು.

‘ರೈತರು ಅತಿವೃಷ್ಟಿ, ಅನಾವೃಷ್ಟಿಯಿಂದ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ರೈತರ ಸಮಸ್ಯೆ ಬಗೆಹರಿಸುವಲ್ಲಿ ಎಲ್ಲಾ ಸರ್ಕಾರಗಳೂ ಕ್ರಮವಹಿಸಬೇಕು. ವಿದಾನಸಭಾ ಕ್ಷೇತ್ರವಾರು ನಾವು ನಿರೀಕ್ಷೆ ಮಾಡಿದಷ್ಟು ಅನುದಾನ ಬಂದಿಲ್ಲ. ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಿಳಿಸಿದ್ದಾರೆ.‌ ಗ್ಯಾರಂಟಿ ಯೋಜನೆಯಿಂದ ಅನುದಾನ ಕಡಿಮೆಯಾಯಿತು ಎನ್ನುವುದನ್ನು ನಾನು ಒಪ್ಪುವುದಿಲ್ಲ’ ಎಂದರು.

ADVERTISEMENT

ಸಂಘದ ಅಧ್ಯಕ್ಷ ಎಂ.ರಾಜು, ಕಾರ್ಯನಿರ್ವಾಹಕ ಅಧ್ಯಕ್ಷ ಎಸ್.ದೇವರಾಜು, ಕಾರ್ಯದರ್ಶಿ ಸಿ.ಕೆ.ಅರುಣ್, ಟ್ರಸ್ಟಿ ಮನ್ಸೂರ್ ಅಹಮದ್ ಖಾನ್, ಉಪಾಧ್ಯಕ್ಷ ಎಚ್.ಕೆ.ಮಂಜುನಾಥ, ಜಂಟಿ ಕಾರ್ಯದರ್ಶಿ ವಿ.ಬಿ.ಮಹೇಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.