ADVERTISEMENT

ಮೈಸೂರು: ಲಂಚ ಪಡೆಯುತ್ತಿದ್ದ ವೇಳೆ ಸೆಸ್ಕ್‌ ಎಇಇ ಲೋಕಾಯುಕ್ತ ಬಲೆಗೆ

​ಪ್ರಜಾವಾಣಿ ವಾರ್ತೆ
Published 18 ಜೂನ್ 2025, 12:54 IST
Last Updated 18 ಜೂನ್ 2025, 12:54 IST
<div class="paragraphs"><p>ಕರ್ನಾಟಕ ಲೋಕಾಯುಕ್ತ</p></div>

ಕರ್ನಾಟಕ ಲೋಕಾಯುಕ್ತ

   

ಮೈಸೂರು: ಇಲ್ಲಿನ ಹೋಟೆಲ್‌ನಲ್ಲಿ ಸೆಸ್ಕ್‌ ಎಇಇ ದೀಪಕ್‌ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಪ್ರಕರಣ ದಾಖಲಾಗಿದೆ.

‘ದೀಪಕ್‌ ಸೆಸ್ಕ್‌ ವಿಜಿಲೆನ್ಸ್‌ ಅಧಿಕಾರಿಯಾಗಿದ್ದು, ಅನಧಿಕೃತ ವಿದ್ಯುತ್‌ ಸಂಪರ್ಕದ ದಂಡ ಕಡಿಮೆ ಮಾಡಲು ₹3 ಲಕ್ಷ ಲಂಚ ಸ್ವೀಕರಿಸುತ್ತಿದ್ದರು. ಈ ವೇಳೆ ದಾಳಿ ನಡೆಸಿ ಹಣ ವಶಕ್ಕೆ ಪಡೆಯಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ADVERTISEMENT

ಲೋಕಾಯುಕ್ತ ಎಸ್‌ಪಿ ಟಿ.ಜೆ. ಉದೇಶ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಮ್ಯಾಥ್ಯು ಥಾಮಸ್, ಇನ್‌ಸ್ಪೆಪೆಕ್ಟರ್ ರವಿಕುಮಾರ್ ಮತ್ತು ತಂಡ ಕಾರ್ಯಾಚರಣೆ ನಡೆಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.