ADVERTISEMENT

ಧ್ರುವನಾರಾಯಣ ಮೇಕೆ ಮೇಯಿಸಲು ಲಾಯಕ್‌: ವಿ.ಶ್ರೀನಿವಾಸಪ್ರಸಾದ್ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2022, 21:27 IST
Last Updated 18 ಮಾರ್ಚ್ 2022, 21:27 IST
ವಿ.ಶ್ರೀನಿವಾಸ ಪ್ರಸಾದ್
ವಿ.ಶ್ರೀನಿವಾಸ ಪ್ರಸಾದ್   

ತಿ.ನರಸೀಪುರ: ‘ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌.ಧ್ರುವನಾರಾಯಣ ಮೇಕೆ ಮೇಯಿಸಲು ಮಾತ್ರ ಲಾಯಕ್. ಅವರನ್ನು ಸಂಸದರನ್ನಾಗಿ ಮಾಡಿ ತಪ್ಪು ಮಾಡಿದೆ’ ಎಂದು ಸಂಸದ ವಿ.ಶ್ರೀನಿವಾಸಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘40 ವರ್ಷಗಳ ನನ್ನ ರಾಜಕೀಯ ಜೀವನದಲ್ಲಿ ಏನು ಮಾಡಿದ್ದೇನೆ ಎಂಬುದು ಜನರಿಗೆ ಗೊತ್ತಿದೆ. ನನ್ನ ಸಾಧನೆ ಏನೂ ಇಲ್ಲ ಎಂದು ಹೇಳುವ ನೈತಿಕತೆ ಅವರಿಗಿಲ್ಲ. ಅವರನ್ನು ಸಂಸದರನ್ನಾಗಿ ಮಾಡಿದ್ದು ಯಾರು ಎಂಬುದನ್ನು ನೆನಪಿಸಿಕೊಳ್ಳಲಿ. ಕರ್ನಾಟಕದಲ್ಲಿದ್ದಾಗ ಸಿದ್ದರಾಮಯ್ಯ ಜತೆ, ದೆಹಲಿಗೆ ಹೋದಾಗ ಮಲ್ಲಿಕಾರ್ಜುನ ಖರ್ಗೆ ಜತೆ, ಹೊರಗಿದ್ದಾಗ ಡಿ.ಕೆ.ಶಿವಕುಮಾರ್ ಜತೆ ಗುರುತಿಸಿಕೊಳ್ಳುವ ಧ್ರುವನಾರಾಯಣ ಅವರಿಗೆ ಯಾವ ನೈತಿಕತೆ ಇದೆ’ ಎಂದು ಪ್ರಶ್ನಿಸಿದರು.

‘ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಜನ ತಿರಸ್ಕರಿಸಿದ್ದಾರೆ. ಕಾಂಗ್ರೆಸ್‍ ಈಗಾಗಲೇ ನೆಲ ಕಚ್ಚಿದೆ. ತಿ.ನರಸೀಪುರ ವಿಧಾನಸಭಾ ಚುನಾವಣೆಯಲ್ಲಿ 10 ಸಾವಿರ ಮತ ಪಡೆದಿದ್ದ ಬಿಜೆಪಿಗೆ, ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಮತಗಳು ಬಂದಿದ್ದವು. ಮುಖ್ಯಮಂತ್ರಿಯಾಗಿದ್ದವರ ಕ್ಷೇತ್ರದಲ್ಲಿ ಬಿಜೆಪಿಗೆ ಹೆಚ್ಚು ಮತಗಳು ಬಂದಿವೆ ಎಂದರೆ ಅವರ ಯೋಗ್ಯತೆ ಏನು ಎಂಬುದು ತಿಳಿಯುತ್ತದೆ’ ಎಂದು ವಾಗ್ದಾಳಿ ನಡೆಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.