ನಾಡದೇವತೆ ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ಹಿನ್ನೆಲೆಯಲ್ಲಿ ಉತ್ಸವ ಮೂರ್ತಿ ಮೆರವಣಿಗೆಯಲ್ಲಿ ನಡೆಯಿತು.
ಪ್ರಜಾವಾಣಿ ಚಿತ್ರ: ಅನೂಪ್ ರಾಘ.ಟಿ.
ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ವರ್ಧಂತಿ ಪ್ರಯುಕ್ತ ಉತ್ಸವ ಮೂರ್ತಿಯ ಚಿನ್ನದ ಪಲ್ಲಕ್ಕಿ ಮೆರವಣಿಗೆಗೆ ರಾಜವಂಶಸ್ಥರಾದ ತ್ರಿಶಿಕಾ ಒಡೆಯರ್, ಯದುವೀರ್ ಕೃಷ್ಣದತ್ತ ಒಡೆಯರ್, ಪ್ರಮೋದ ದೇವಿ ಒಡೆಯರ್, ಶಾಸಕ ಜಿ.ಟಿ. ದೇವೇಗೌಡ, ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ರೂಪ ಚಾಲನೆ ನೀಡಿದರು.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ‘ಚಾಮುಂಡೇಶ್ವರಿ ವರ್ಧಂತಿ’ ಪ್ರಯುಕ್ತ ಉತ್ಸವ ಮೂರ್ತಿಗೆ ದೇವಾಲಯದ ಮುಖ್ಯ ಅರ್ಚಕ ಶಶಿಶೇಖರ ದೀಕ್ಷಿತ್ ಆರತಿ ಬೆಳಗಿದರು.
ವರ್ಧಂತಿಯಲ್ಲಿ ಸಾವಿರಾರು ಭಕ್ತದಿಗಳು ಚಾಮುಂಡಿ ದೇವಿಯ ದರ್ಶನ ಪಡೆದರು.
ಅಪಾರ ಸಂಖ್ಯೆಯ ಭಕ್ತರು ‘ಜೈ ದುರ್ಗೆ, ಜೈ ಚಾಮುಂಡೇಶ್ವರಿ’ ಎಂಬ ಘೋಷಣೆ ಕೂಗುತ್ತ ಸಂಭ್ರಮಿಸಿದರು.
ಚಾಮುಂಡೇಶ್ವರಿ ವರ್ಧಂತಿ ಪ್ರಯುಕ್ತ ಉತ್ಸವ ಮೂರ್ತಿಯ ಚಿನ್ನದ ಪಲ್ಲಕ್ಕಿ ಮೆರವಣಿಗೆ ನಡೆಯಿತು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.