ADVERTISEMENT

ಆಷಾಢ ಶುಕ್ರವಾರ: ಚಾಮುಂಡೇಶ್ವರಿಗೆ ವಿಶೇಷ ಪೂಜೆ, ದರ್ಶನ ಪಡೆದ ನಟ ದರ್ಶನ್

​ಪ್ರಜಾವಾಣಿ ವಾರ್ತೆ
Published 10 ಜುಲೈ 2020, 4:05 IST
Last Updated 10 ಜುಲೈ 2020, 4:05 IST
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರದ ಪ್ರಯುಕ್ತ ಸಾಲಂಕೃತ ಚಾಮುಂಡೇಶ್ವರಿ ವಿಗ್ರಹ
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರದ ಪ್ರಯುಕ್ತ ಸಾಲಂಕೃತ ಚಾಮುಂಡೇಶ್ವರಿ ವಿಗ್ರಹ   
""

ಮೈಸೂರು: ಆಷಾಢ ಮಾಸದ ಮೂರನೇ ಶುಕ್ರವಾರ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೆರವೇರಿತು.

ಚಾಮುಂಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ನೇತೃತ್ವದಲ್ಲಿ ನಸುಕಿನಲ್ಲೇ ದೇವಿಗೆ ವಿವಿಧ ಪೂಜೆ ಸಲ್ಲಿಸಲಾಯಿತು. ಬಳಿಕ ದೇವಸ್ಥಾನದ ಒಳ ಆವರಣದಲ್ಲಿ ಅಮ್ಮನವರ‌ ಉತ್ಸವಮೂರ್ತಿ ಮೆರವಣಿಗೆ ನಡೆಯಿತು.

ಕೊರೊನಾ ವೈರಸ್ ಸೋಂಕು ಹರಡುವಿಕೆ ತಡೆಗಟ್ಟಲಿಕ್ಕಾಗಿ ಆಷಾಢ ಶುಕ್ರವಾರದಂದು ಭಕ್ತರ ಪ್ರವೇಶ ನಿಷೇಧಿಸಲಾಗಿದೆ.

ADVERTISEMENT

ಸಂಪ್ರದಾಯದಂತೆ ದೇವಿಗೆ ಅಭಿಷೇಕ, ನಂತರ ವಿಶೇಷ ಪೂಜೆ ನಡೆದವು. ಪೂಜಾ ವಿಧಿವಿಧಾನಗಳು ನೆರವೇರಿದ ಬಳಿಕ ದೇವಸ್ಥಾನದ ಬಾಗಿಲು ಮುಚ್ಚಲಾಯಿತು.

ಕೊರೊನಾ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದಲ್ಲಿ ದೇವರ ದರ್ಶನಕ್ಕೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸಿರುವ ಹಿನ್ನೆಲೆಯಲ್ಲಿ
ಮೂರನೇ ಶುಕ್ರವಾರವೂ ಚಾಮುಂಡಿ ಬೆಟ್ಟ ಖಾಲಿ ಖಾಲಿಯಾಗಿತ್ತು.

ದೇವಿಯ ದರ್ಶನ ಪಡೆದ ನಟ ದರ್ಶನ್: 3ನೇ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್, ನಾಡದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದರು. ತಮ್ಮ ಸ್ನೇಹಿತ ಉಪಮೇಯರ್ ಸಿ. ಶ್ರೀಧರ್ ಜೊತೆಗೂಡಿ ಬೆಟಕ್ಕೆ ಆಗಮಿಸಿದ ನಟ ದರ್ಶನ್, ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಆಷಾಢ ಮಾಸದಲ್ಲಿ ಸ್ನೇಹಿತರ ಜೊತೆಗೂಡಿ ಚಾಮುಂಡೇಶ್ವರಿ ದರ್ಶನ ಪಡೆದ ಬಗ್ಗೆ ನಟ ದರ್ಶನ್ ಸಂತಸ ವ್ಯಕ್ತಪಡಿಸಿದರು.

ಸಚಿವ ಕೆ.ಎಸ್.ಈಶ್ವರಪ್ಪ ಸಹ ಬೆಟ್ಟಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.