ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ದೇವಿಕೆರೆಯಲ್ಲಿ ಚಾಮುಂಡೇಶ್ವರಿ ತೆಪ್ಪೋತ್ಸವ ನೂರಾರು ಜನರ ಸಮ್ಮುಖದಲ್ಲಿ ಸಂಭ್ರಮದಿಂದ ಶನಿವಾರ ನೆರವೇರಿತು
ಪ್ರಜಾವಾಣಿ ಚಿತ್ರ: ಹಂಪಾ ನಾಗರಾಜ್
ಮೈಸೂರು: ಇಲ್ಲಿನ ಚಾಮುಂಡಿಬೆಟ್ಟದಲ್ಲಿರುವ ದೇವಿಕೆರೆಯಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯ ತೆಪ್ಪೋತ್ಸವ ನೂರಾರು ಜನರ ಸಮ್ಮುಖದಲ್ಲಿ ಶನಿವಾರ ಸಂಭ್ರಮದಿಂದ ನೆರವೇರಿತು.
ದಸರಾ ಅಂಗವಾಗಿ ನಡೆಯುವ ವಿಜಯದಶಮಿ ಮೆರವಣಿಗೆಯ ನಂತರ ಬೆಟ್ಟದಲ್ಲಿ ಚಾಮುಂಡೇಶ್ವರಿ ಅಮ್ಮನವರ ರಥೋತ್ಸವದ ನಂತರ ತೆಪ್ಪೋತ್ಸವವನ್ನು ಆಯೋಜಿಸುವುದು ಸಂಪ್ರದಾಯ. ಪ್ರತಿ ಬಾರಿಯೂ ಕತ್ತಲಾದ ನಂತರ ಉತ್ಸವ ನಡೆಯುತ್ತಿತ್ತು. ಈ ಬಾರಿ ಚಂದ್ರಗ್ರಹಣದ ಕಾರಣದಿಂದಾಗಿ ಸಂಜೆ 5ಕ್ಕೆ ಸರಿಯಾಗಿ ತೆಪ್ಪೋತ್ಸವ ನೆರವೇರಿಸಲಾಯಿತು. ಪುನರುಜ್ಜೀವನಗೊಂಡಿರುವ ದೇವಿಕೆರೆಯಲ್ಲಿ ತೆಪ್ಪೋತ್ಸವ ನಡೆದದ್ದು ಈ ಬಾರಿಯ ವಿಶೇಷ.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ದೇವಿಕೆರೆಯಲ್ಲಿ ಚಾಮುಂಡೇಶ್ವರಿ ತೆಪ್ಪೋತ್ಸವ ನೂರಾರು ಜನರ ಸಮ್ಮುಖದಲ್ಲಿ ಸಂಭ್ರಮದಿಂದ ಶನಿವಾರ ನೆರವೇರಿತು
‘ಬೆಟ್ಟದಲ್ಲಿ ಶನಿವಾರ ಬೆಳಿಗ್ಗೆ ದೇವಿಗೆ ವಸಂತಪೂಜೆ ನೆರವೇರಿಸಲಾಯಿತು. ಬಳಿಕ ಅವಭೃತ ತೀರ್ಥಸ್ನಾನ ಹಾಗೂ ಮಂಟಪೋತ್ಸವ ನಡೆಯಿತು. ಬಳಿಕ ಉತ್ಸವ ಮೂರ್ತಿಯನ್ನು ಚಿನ್ನದ ಪಲ್ಲಕ್ಕಿಯಲ್ಲಿಟ್ಟು ತೆಪ್ಪೋತ್ಸವ ನೆರವೇರಿಸಿ, ವಿಶೇಷ ಪೂಜಾ ಕಾರ್ಯ ನೆರವೇರಿಸಲಾಯಿತು. ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ನೇತೃತ್ವದಲ್ಲಿ ಪೂಜೆ ಸಲ್ಲಿಸಲಾಯಿತು. ಸಂಜೆ 6ರೊಳಗೆ ಮೂರ್ತಿಯನ್ನು ದೇವಸ್ಥಾನಕ್ಕೆ ವಾಪಸ್ ತರಲಾಯಿತು.
‘ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಈ ಬಾರಿ ತೆಪ್ಪೋತ್ಸವವನ್ನು ಸಂಜೆಯೇ ನಡೆಸಲಾಯಿತು. ಉತ್ಸವ ಮೂರ್ತಿಯನ್ನು ವಾಸಪ್ ತರುತ್ತಿದ್ದಂತೆಯೇ ದೇವಸ್ಥಾನದ ಬಾಗಿಲನ್ನು ಮುಚ್ಚಲಾಯಿತು. ಗ್ರಹಣ ಕಾಲದಲ್ಲಿ ದೇವಾಲಯದಲ್ಲಿ ಪೂಜಾ ಕೈಂಕರ್ಯ ನೆರವೇರಿದವು. ಅ.29ರಂದು (ಭಾನುವಾರ) ಬೆಳಿಗ್ಗೆ 7.30ರಿಂದ ದೇವಸ್ಥಾನದಲ್ಲಿ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶವಿರಲಿದೆ’ ಎಂದು ಶಶಿಶೇಖರ್ ದೀಕ್ಷಿತ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.