
ಡಾ.ಎಚ್.ಸಿ.ಮಹದೇವಪ್ಪ ಅವರು ರಸ್ತೆ ಕಾಮಗಾರಿ ಪರಿಶೀಲಿಸಿದರು
ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಚಾಮುಂಡಿ ಬೆಟ್ಟದಲ್ಲಿ ‘ನಂದಿ’ ವಿಗ್ರಹದ ಸ್ಥಳಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ನಡೆದಿರುವ ದುರಸ್ತಿ ಕಾಮಗಾರಿಯನ್ನು ಭಾನುವಾರ ಪರಿಶೀಲಿಸಿದರು.
2021ರ ಅಕ್ಟೋಬರ್‌ನಲ್ಲಿ ಭಾಸಿ ಮಳೆಯಿಂದಾಗಿ ಈ ರಸ್ತೆಯಲ್ಲಿ ಕುಸಿತ ಉಂಟಾಗಿತ್ತು. ಬಳಿಕ ಆ ಮಾರ್ಗದಲ್ಲಿ ಜನರು ಹಾಗೂ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ರಸ್ತೆಯ ಮರುನಿರ್ಮಾಣ ಕಾರ್ಯ ಆಮೆವೇಗದಲ್ಲಿ ನಡೆಯುತ್ತಿರುವ ಕುರಿತು ದೂರುಗಳು ಕೇಳಿಬಂದ ಕಾರಣದಿಂದ ಸಚಿವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಕಾಂಕ್ರೀಟ್ ತಡೆಗೋಡೆ ನಿರ್ಮಾಣ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ‘ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ನಂದಿ ವಿಗ್ರಹಕ್ಕೆ ತೆರಳುವ ಮಾರ್ಗವು ಕಿರಿದಾಗಿದ್ದು, ವಾಹನ ಚಲಾಯಿಸುವುದು ಅಸಾಧ್ಯವಾಗಿದೆ. ಈ ಕಾರಣದಿಂದ ಗುಣಮಟ್ಟದ ರಸ್ತೆಯನ್ನು ಮರುನಿರ್ಮಿಸಬೇಕು’ ಎಂದು ಸೂಚಿಸಿದರು.
ಸಚಿವರ ವಿಶೇಷ ಕರ್ತವ್ಯಾಧಿಕಾರಿ ರವಿಕುಮಾರ್, ಆಪ್ತ ಸಹಾಯಕರಾದ ಶ್ರೀನಿವಾಸ್ ಹಾಗೂ ರಮೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.