ADVERTISEMENT

ಚಿನ್ನಾಭರಣ ಪಡೆದು ವಂಚನೆ: ಬಂಧನ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2020, 2:06 IST
Last Updated 20 ಅಕ್ಟೋಬರ್ 2020, 2:06 IST

ಮೈಸೂರು: ಮಾರಾಟ ಮಾಡಿಸಿ ಕೊಡುವುದಾಗಿ ಹೇಳಿ ಚಿನ್ನದ ಒಡವೆ ಪಡೆದು ವಂಚಿಸಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದ, ₹ 10 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಕುಶಾಲನಗರದ ಚಿನ್ನ ಬೆಳ್ಳಿ ಕೆಲಸಗಾರ ಸೋಮಶೇಖರ್ (61), ಕೊಳ್ಳೆಗಾಲದ ಚಿನ್ನ ಬೆಳ್ಳಿ ಕೆಲಸಗಾರ ರಘು (62) ಬಂಧಿತರು.

ತಮಿಳುನಾಡಿನ ಕೊಯಮತ್ತೂರಿನಲ್ಲಿ ಚಿನ್ನದ ಆಭರಣಗಳನ್ನು ತಯಾರು ಮಾಡುವ ವ್ಯವಹಾರ ಮಾಡಿಕೊಂಡಿದ್ದು ಕುರುಪುಸ್ವಾಮಿ ಎಂಬುವವರು ಮೈಸೂರಿನಲ್ಲಿ ಚಿನ್ನದ ಆಭರಣಗಳನ್ನು ಮಾರಾಟ ಮಾಡಲು ಅ.6ರಂದು ಮೈಸೂರಿಗೆ ಬಂದಿದ್ದರು. ಆಗ ಅವರನ್ನು ಸೋಮಶೇಖರ್ ಮತ್ತು ರಘು ವಂಚಿಸಿದ್ದರು ಎಂದು ದೇವರಾಜ ಠಾಣೆ ಪೊಲೀಸರು ತಿಳಿಸಿದ್ದಾರೆ. 192 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ADVERTISEMENT

ಡಿಸಿಪಿ ಗೀತಪ್ರಸನ್ನ ಹಾಗೂ ದೇವರಾಜ ವಿಭಾಗದ ಎಸಿಪಿ ಎಂ.ಎನ್.ಶಶಿಧರ್ ನೇತೃತ್ವದಲ್ಲಿ ನಡೆದ ಪತ್ತೆ ಕಾರ್ಯದಲ್ಲಿ ದೇವರಾಜ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಪ್ರಸನ್ನ ಕುಮಾರ್ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

ದ್ವಿಚಕ್ರ ವಾಹನ ಕಳ್ಳರ ಬಂಧನ: ಮೂವರು ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿರುವ ಪೋಲಿಸರು ₹ 12 ಲಕ್ಷ ಮೌಲ್ಯದ 17 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ದೇವರಾಜ ವಿಭಾಗದ ಎಸಿಪಿ ಶಶಿಧರ್, ಉದಯಗಿರಿ ಪೊಲೀಸ್ ಇನ್ಸ್‌ಪೆಕ್ಟರ್ ಎನ್.ಎಂ.ಪೂಣಚ್ಚ ನೇತೃತ್ವದ ಈ ಕಾರ್ಯಾಚರಣೆ ನಡೆದಿದೆ.

ಮೂವರು ರಾತ್ರಿ ವೇಳೆಯಲ್ಲಿ ಮನೆಯ ಮುಂಭಾಗ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದರು ಎಂಬುದು ತಿಳಿದು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.