ಸ್ನೇಹಮಯಿ ಕೃಷ್ಣ.
ಪ್ರಜಾವಾಣಿ ಚಿತ್ರ.
ಮೈಸೂರು: ಚೆಕ್ ಬೌನ್ಸ್ ಪ್ರಕರಣದ ಆರೋಪಿ ಸ್ನೇಹಮಯಿ ಕೃಷ್ಣಗೆ ಇಲ್ಲಿನ ಮೂರನೇ ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್ ನ್ಯಾಯಾಲಯವು ₹2.25 ಲಕ್ಷ ದಂಡ ವಿಧಿಸಿ ಗುರುವಾರ ಆದೇಶಿಸಿದ್ದು, ಪಾವತಿಸುವಲ್ಲಿ ವಿಫಲವಾದರೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.
ಕೃಷ್ಣ 2015ರಲ್ಲಿ ಲಲಿತಾದ್ರಿಪುರದ ಕುಮಾರ್ ಎಂಬವರಿಂದ ಸಾಲ ಪಡೆದು, ಪ್ರತಿಯಾಗಿ ಮರ್ಚೆಂಟ್ಸ್ ಕೋ–ಆಪರೇಟಿವ್ ಬ್ಯಾಂಕ್‌ನ ಚೆಕ್ ನೀಡಿದ್ದರು. ಕುಮಾರ್ ಅದನ್ನು ತಮ್ಮ ಬ್ಯಾಂಕ್ ಖಾತೆಗೆ ಹಾಕಿದಾಗ ಬೌನ್ಸ್ ಆಗಿತ್ತು. ನಂತರ ಅವರು ಕೃಷ್ಣ ವಿರುದ್ಧ ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು, ಆರೋಪ ಸಾಬೀತಾಗಿದ್ದರಿಂದ ಶಿಕ್ಷೆ ಪ್ರಕಟಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕೃಷ್ಣ, ‘ಪ್ರತಿವಾದಿಯು ನನಗೆ ದುಡ್ಡು ಕೊಡದೆ, ನನ್ನ ನಂಬಿಕೆ ದುರುಪಯೋಗಪಡಿಸಿಕೊಂಡು ನಾನು ನೀಡಿರುವ ಚೆಕ್ ಬೌನ್ಸ್ ಮಾಡಿ, ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ನಾನು ಮೇಲ್ಮನವಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದು, ಜಾಮೀನು ದೊರಕಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.