ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಮೈಸೂರಿಗೆ ಭೇಟಿ ನೀಡಿದ್ದು, ಶಾಸಕ ರಾಮದಾಸ್ ಅವರು ಎಲ್ಲಾ ಕಾರ್ಯಕ್ರಮಗಳಿಂದ ದೂರ ಉಳಿದಿದ್ದಾರೆ.
ಚಾಮುಂಡಿಬೆಟ್ಟದಲ್ಲಿ ಮುಖ್ಯಮಂತ್ರಿಯನ್ನು ಸ್ವಾಗತಿಸಲು ಜಿಲ್ಲೆಯ ಬಿಜೆಪಿ ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು, ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಇದ್ದರು.
ಆದರೆ, ಸಚಿವ ಸ್ಥಾನ ಕೈತಪ್ಪಿದ್ದರಿಂದ ಮುನಿಸಿಕೊಂಡಿರುವ ರಾಮದಾಸ್ ಗೈರು ಎದ್ದು ಕಾಣುತ್ತಿತ್ತು.
ಬಿಜೆಪಿ ಕಚೇರಿಗೆ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿ ಜಿಲ್ಲೆಗೆ ಭೇಟಿ ನೀಡಿದ ಅವರನ್ನು ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲೂ ರಾಮದಾಸ್ ಕಾಣಿಸಲಿಲ್ಲ.
ಬಳಿಕ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್ ಸಭೆ ನಡೆಸಿದರು. ಜೆಡಿಎಸ್ ಪಕ್ಷದ ಎಲ್ಲಾ ಶಾಸಕರು ಇದ್ದರು. ಆದರೆ, ರಾಮದಾಸ್ ಗೈರಾಗಿದ್ದರು.
ಬದಲಾಗಿ ಕೃಷ್ಣರಾಜ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.