
ಪ್ರಜಾವಾಣಿ ವಾರ್ತೆ
ಮೈಸೂರು: ತಾಲ್ಲೂಕಿನ ಯರಗನಹಳ್ಳಿಯ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಪಡೆದರು.
ಮೃತರ ಸಂಬಂಧಿಕರಿಗೆ ಸಾಂತ್ವನ ಹೇಳಿದರು.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೃತರಿಗೆ ತಲಾ ₹ 3 ಲಕ್ಷದಂತೆ ₹ 12 ಲಕ್ಷ ಪರಿಹಾರ ಘೋಷಿಸಲಾಗಿದೆ ಎಂದು ತಿಳಿಸಿದರು.
ನಗರಾಭಿವೃದ್ಧಿ ಸಚಿವ ಬಿ.ಎಸ್. ಸುರೇಶ್, ಶಾಸಕ ತನ್ವೀರ್ ಸೇಠ್ ಜತೆಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.