ADVERTISEMENT

ಮೈಸೂರಿನಲ್ಲಿ ಮುಖ್ಯಮಂತ್ರಿ: ಅಹವಾಲು ಸ್ವೀಕಾರ, ಮೈಲಾರಿ ಹೋಟೆಲ್‌ನಲ್ಲಿ ಉಪಾಹಾರ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2025, 9:53 IST
Last Updated 22 ಡಿಸೆಂಬರ್ 2025, 9:53 IST
   

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಇಲ್ಲಿನ ಟಿ.ಕೆ. ಬಡಾವಣೆಯಲ್ಲಿರುವ ತಮ್ಮ ನಿವಾಸದ ಬಳಿ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಿದರು.

ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಭಾನುವಾರ ಸಂಜೆ ನಡೆದ ಸುತ್ತೂರು ಮಠದ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತಿ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ರಾತ್ರಿ ನಗರಕ್ಕೆ ಬಂದು ವಾಸ್ತವ್ಯ ಹೂಡಿದ್ದ ಅವರು, ನಿವಾಸದ ಬಳಿಗೆ ಮನವಿ, ಬೇಡಿಕೆಗಳೊಂದಿಗೆ ಬಂದಿದ್ದ ಸಾರ್ವಜನಿಕರನ್ನು ಭೇಟಿಯಾದರು. ಮನವಿ ಪತ್ರಗಳನ್ನು ಸ್ವೀಕರಿಸಿದರು.

ಬಳಿಕ, ಅಗ್ರಹಾರ ಸಮೀಪದ ಮೈಲಾರಿ ಹೋಟೆಲ್‌ನಲ್ಲಿ ಆಪ್ತರು, ಅಧಿಕಾರಿಗಳೊಂದಿಗೆ ಉಪಾಹಾರ (ದೋಸೆ, ಇಡ್ಲಿ) ಸೇವಿಸಿದರು. ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ. ಮಹದೇವಪ್ಪ, ಪಶುಸಂಗೋಪನಾ ಸಚಿವ ಎಚ್‌.ಎ. ವೆಂಕಟೇಶ್‌, ಕೆ.ಆರ್.ನಗರ ಶಾಸಕ ಡಿ.ರವಿಶಂಕರ್‌, ಮಾಜಿ ಶಾಸಕ ಎಂ.ಕೆ.ಸೋಮಶೇಖರ್‌, ಮುಖಂಡರಾದ ಮರಿಸ್ವಾಮಿ, ಮಾರ್ಬಳ್ಳಿ ಕುಮಾರ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್‌ಕುಮಾರ್, ನಗರ ಪೊಲೀಸ್ ಕಮಿಷನರ್‌ ಸೀಮಾ ಲಾಟ್ಕರ್‌, ಎಸ್‌ಪಿ ಎನ್. ವಿಷ್ಣುವರ್ಧನ್‌ ಜೊತೆಗಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.