ADVERTISEMENT

ನಾಳೆ ಮುಖ್ಯಮಂತ್ರಿ ಮೈಸೂರು ಜಿಲ್ಲಾ ಪ್ರವಾಸ

​ಪ್ರಜಾವಾಣಿ ವಾರ್ತೆ
Published 28 ಜನವರಿ 2023, 14:15 IST
Last Updated 28 ಜನವರಿ 2023, 14:15 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜ.29ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಮಧ್ಯಾಹ್ನ 12.05ಕ್ಕೆ ಮಂಡಕಳ್ಳಿ ವಿಮಾನನಿಲ್ದಾಣಕ್ಕೆ ಬರುವ ಅವರು, ಮಧ್ಯಾಹ್ನ 12.30ಕ್ಕೆ ಎಚ್.ಡಿ.ಕೋಟೆ ರಸ್ತೆಯ ಉದ್ಬೂರು ಕ್ರಾಸ್ ಸಮೀಪದ ಹಾಲಾಳು ಗ್ರಾಮದಲ್ಲಿ ಡಾ.ವಿಷ್ಣುವರ್ಧನ್ ಪ್ರತಿಷ್ಠಾನ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಿರುವ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 2.30ಕ್ಕೆ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಆವರಣದಲ್ಲಿ ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಿಂದ ಅಂಗವಿಕಲರಿಗೆ ಉಚಿತ ಸಾಧನ–ಸಲಕರಣೆಗಳ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.