
ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಲ್ಲೂರು ಜಾತ್ರೆಯಲ್ಲಿ ದೇವಸ್ಥಾನ ಮುಂಭಾಗದಲ್ಲಿ ಸೇರಿದ್ದ ಭಕ್ತರು
ಕೊಳ್ಳೇಗಾಲ: ತಾಲ್ಲೂಕಿನ ಚಿಕ್ಕಲ್ಲೂರು ಸಿದ್ದಪ್ಪಾಜಿ ಜಾತ್ರೆಯ ಮೂರನೇ ದಿನವಾದ ಸೋಮವಾರ ದೊಡ್ಡವರ ಸೇವೆ, ಮುಡಿಸೇವೆ, ನೀಲಗಾರರ ದೀಕ್ಷೆ ಆಚರಣೆಗಳು ಅದ್ದೂರಿಯಾಗಿ ನಡೆದವು.
ರಾಜ್ಯದ ವಿವಿಧ ಜಿಲ್ಲೆ ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ಬಂದಿದ್ದ ಭಕ್ತರು ಸಮೂಹ ದೇವಸ್ಥಾನದ ಮುಂದೆ ಧೂಪ, ಸಾಮ್ರಾಣಿ, ಕರ್ಪೂರ, ಹಣ್ಣು ಕಾಯಿ ಸಮರ್ಪಿಸಿ ಸುಡುಬಿಸಿಲನ್ನು ಲೆಕ್ಕಿಸದೆ ಉರುಳು ಸೇವೆ ಮಾಡಿದರು. ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಂತು ಸಿದ್ದಪ್ಪಾಜಿಯ ದರ್ಶನ ಪಡೆದರು.
ಗಂಡು-ಹೆಣ್ಣು ಎಂಬ ಭೇದವಿಲ್ಲದೆ ಸಾವಿರಾರು ಭಕ್ತರು ಕೇಶಮುಂಡನ ಮಾಡಿಸಿಕೊಂಡು ಹರಕೆ ತೀರಿಸಿದರು. ಕೆಲವರು ಮಕ್ಕಳಿಗೆ ನೀಲಗಾರ ದೀಕ್ಷೆ ಕೊಡಿಸಿದರು. ಮಕ್ಕಳು, ಯುವಕರು ಹೆಚ್ಚಾಗಿದ್ದರು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಜಾತ್ರೆಯಲ್ಲಿ ಭಕ್ತರು ಹೆಚ್ಚಾಗಿದ್ದಾರೆ. ಜಾತ್ರೆಯಲ್ಲಿ ವ್ಯಾಪಾರವು ಜೋರಾಗಿದೆ. ಮಾಲೀಕರ ಮೊಗದಲ್ಲಿ ಮಂದಹಾಸ ಮೂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.