ADVERTISEMENT

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಮೈಸೂರು ಅಭಿವೃದ್ಧಿಯಾಗಿಲ್ಲ: ಸಿಎಂ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2022, 12:54 IST
Last Updated 6 ಸೆಪ್ಟೆಂಬರ್ 2022, 12:54 IST
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ   

ಮೈಸೂರು: ‘ಪಕ್ಷದ ಶಿವಕುಮಾರ್‌ ಹಾಗೂ ಜಿ.ರೂಪಾ ಕ್ರಮವಾಗಿ ಮೇಯರ್ ಮತ್ತು ಉಪ ಮೇಯರ್‌ ಆಗಿ ಆಯ್ಕೆಯಾಗಿರುವುದರಿಂದ ಮೈಸೂರಿಗೆ ಶುಭ ದಿನ. ಅವರ ಕಾಲದಲ್ಲಿ ಮೈಸೂರಿನ ಸಮಗ್ರ ಅಭಿವೃದ್ಧಿ ಆಗಲಿ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಶಯ ವ್ಯಕ್ತಪಡಿಸಿದರು.

‘ಈ ಜಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಸಂಸದ ಪ್ರತಾಪ ಸಿಂಹ, ಪದಾಧಿಕಾರಿಗಳು ಹಾಗೂ ಪಾಲಿಕೆ ಸದಸ್ಯರೆಲ್ಲರೂ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಇಲ್ಲಿ ಜೆಡಿಎಸ್‌–ಬಿಜೆಪಿಯ ಹೊಂದಾಣಿಕೆ ಪ್ರಶ್ನೆ ಇಲ್ಲ. ಸ್ಥಳೀಯವಾಗಿ, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ನಗರದ ಅಭಿವೃದ್ಧಿಗೆ ಆಗಿರುವ ಹಿನ್ನಡೆ ಅವರಿಗೆ ನಮಗಿಂತ ಹೆಚ್ಚು ತಿಳಿದುಕೊಂಡಿದ್ದರಿಂದ ಈ ನಿರ್ಣಯ ಬಂದಿದೆ’ ಎಂದರು.

‘ನಾವು ಸ್ಪರ್ಧಿಸುತ್ತಿದ್ದೇವೆ, ಯಾರು ಬೇಕಾದರೂ ಸ್ಪರ್ಧಿಸಬಹುದು ಎಂದು ಹೇಳಿದ್ದೆವು. ಜೆಡಿಎಸ್‌ನವರು ಉಪ ಮೇಯರ್ ಸ್ಥಾನಕ್ಕೆ ಪ್ರಯತ್ನಿಸಿದರು. ಆದರೆ, ತಾಂತ್ರಿಕ ಕಾರಣದಿಂದ ಗೆಲುವುಪಡೆಯಲಾಗಲಿಲ್ಲ. ಈಗ ಚುನಾವಣೆ ಮುಗಿದಿದ್ದು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮೈಸೂರಿನ ಸಮಗ್ರ ಅಭಿವೃದ್ಧಿ ನಮ್ಮೆಲ್ಲರ ಗುರಿಯಾಗಿದೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.