ADVERTISEMENT

ಭೈರಪ್ಪ ಮನೆಗೆ ತೆರಳಿ ಮುಖ್ಯಮಂತ್ರಿ ಅಭಿನಂದನೆ

​ಪ್ರಜಾವಾಣಿ ವಾರ್ತೆ
Published 27 ಜನವರಿ 2023, 8:24 IST
Last Updated 27 ಜನವರಿ 2023, 8:24 IST
   

ಮೈಸೂರು: ಪದ್ಮಭೂಷಣ ಪುರಸ್ಕಾರಕ್ಕೆ ಭಾಜನರಾಗಿರುವ ಕಾದಂಬರಿಕಾರ ಡಾ.ಎಸ್.ಎಲ್.ಭೈರಪ್ಪ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಅಭಿನಂದಿಸಿದರು.

ಇಲ್ಲಿನ ಕುವೆಂಪುನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕಂದಾಯ ಸಚಿವ ಆರ್.ಅಶೋಕ, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಸಂಸದ ಪ್ರತಾಪ ಸಿಂಹ, ಸಾಹಿತಿ ಪ್ರಧಾನ ಗುರುದತ್ತ, ‘ಮುಡಾ’ ಅಧ್ಯಕ್ಷ ಯಶಸ್ವಿ ಎಸ್.ಸೋಮಶೇಖರ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.