ADVERTISEMENT

ಸಿಎಂ ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿದ ‘ಪ್ರಜಾವಾಣಿ’ ಒಳನೋಟ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2025, 0:14 IST
Last Updated 11 ನವೆಂಬರ್ 2025, 0:14 IST
<div class="paragraphs"><p>ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ

   

ಮೈಸೂರು: ’ಪ್ರಜಾವಾಣಿ’ಯಲ್ಲಿ ಅ.26ರಂದು ‘ಒಳನೋಟ’ದಲ್ಲಿ ಪ್ರಕಟವಾಗಿದ್ದ ‘ಬುಡಕಟ್ಟು ಜನರಿಗೆ ಕಳಪೆ ಆಹಾರ’ ವರದಿ ಇಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿತು.

ವರದಿಯ ಪ್ರತಿ ಪ್ರದರ್ಶಿಸಿದ ಮುಖ್ಯಮಂತ್ರಿ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ADVERTISEMENT

‘ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ಜೊತೆಗೆ ಅಧಿಕಾರಿಗಳು ಹಾಸ್ಟೆಲ್‌ಗೆ ದಿಢೀರ್‌ ಭೇಟಿ ಕೊಟ್ಟು ಪರಿಶೀಲನೆ ನಡೆಸುತ್ತಿರಬೇಕು’ ಎಂದು ಸೂಚಿಸಿದರು.

‘ಹಾಡಿಗಳಿಗೆ ಕುಡಿಯುವ ನೀರು, ವಿದ್ಯುತ್ ಪೂರೈಕೆ ಆಗುತ್ತಿದೆಯೇ?’ ಎಂದು ಕೇಳಿದ ಅವರು, ‘ಅರಣ್ಯವಾಸಿಗಳ ವಿಚಾರದಲ್ಲಿ ಅಂತಃಕರಣದಿಂದ ವರ್ತಿಸಬೇಕು’ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.