
ಮೈಸೂರು: ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ನಿರ್ಮಿಸಿರುವ ‘ರಾಜೀವ್ ಗಾಂಧಿ ಡ್ರ್ಯಾಗನ್ ಕೊಳ’ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಸಂಜೆ ಉದ್ಘಾಟಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ ಮಹದೇವಪ್ಪ ‘ಮುಖ್ಯಮಂತ್ರಿಗಳಿಗೆ ಜಿಲ್ಲೆಯ ಮೇಲೆ ಇರುವ ಪ್ರೀತಿಯಿಂದ ಮೈಸೂರು ಜಿಲ್ಲೆಯನ್ನು ವಿಭಿನ್ನವಾಗಿ ಅಭಿವೃದ್ಧಿ ಪಡಿಸುತ್ತಿದ್ದಾರೆ. ತಮ್ಮ ದಿಟ್ಟ ನಿರ್ಧಾರಗಳಿಂದ ಉತ್ತಮ ಆಡಳಿತ ನೀಡುತ್ತಿದ್ದಾರೆ’ ಎಂದರು.
ಸಿದ್ದರಾಮಯ್ಯ ಸಾಧನೆ ಕುರಿತು ಲೇಸರ್ ಶೋ ಪ್ರದರ್ಶಿಸಲಾಯಿತು. ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ವಿಧಾನಪರಿಷತ್ ಸದಸ್ಯ ಡಾ. ತಿಮ್ಮಯ್ಯ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಜಿ., ಜಿಲ್ಲಾ ಪಂಚಾಯಿತಿ ಸಿಇಒ ಯುಕೇಶ್ ಕುಮಾರ್, ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್, ವಸ್ತುಪ್ರದರ್ಶನ ಪ್ರಾಧಿಕಾರದ ಸಿಇಒ ರುದ್ರೇಶ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.