
ಪ್ರಜಾವಾಣಿ ವಾರ್ತೆಸಿದ್ದರಾಮಯ್ಯ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರಿನಲ್ಲಿ ಸೋಮವಾರ ಸತತ 10 ತಾಸುಗಳವರೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ, ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಅನುಷ್ಠಾನದ ಪ್ರಗತಿ ಪರಿಶೀಲಿಸಿದರು.
ಬೆಳಿಗ್ಗೆ 11.30ರಿಂದ ರಾತ್ರಿ 9.30ರವರೆಗೂ ಸಭೆ ಸಭೆ ನಡೆಸಿ, ಬಹುತೇಕ ಇಲಾಖೆಗಳ ಕಾರ್ಯಕ್ರಮಗಳ ಪ್ರಗತಿಯ ಮಾಹಿತಿ ಪಡೆದು, ಅಧಿಕಾರಿಗಳ ಬೆಂಡೆತ್ತಿದರು. ಸಮರ್ಪಕವಾಗಿ ಮಾಹಿತಿ ನೀಡಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಬಿಸಿ ಮುಟ್ಟಿಸಿದರು. ಅಭಿವೃದ್ಧಿ ಕಾರ್ಯಕ್ಕೆ ವೇಗ ನೀಡುವಂತೆ ತಾಕೀತು ಮಾಡಿದರು.
ಸಭಾಂಗಣದಲ್ಲೇ ಮಧ್ಯಾಹ್ನದ ಊಟ ಮಾಡಿ, ಸಭೆ ಮುಂದುವರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.