ADVERTISEMENT

ಜ.18ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

​ಪ್ರಜಾವಾಣಿ ವಾರ್ತೆ
Published 17 ಜನವರಿ 2026, 11:42 IST
Last Updated 17 ಜನವರಿ 2026, 11:42 IST
   

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.18ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಅಂದು ಬೆಳಿಗ್ಗೆ 10.25ಕ್ಕೆ ವಿಶೇಷ ವಿಮಾನದಲ್ಲಿ ಮಂಡಕಳ್ಳಿ ವಿಮಾನನಿಲ್ದಾಣಕ್ಕೆ ಬಂದಿಳಿಯುವ ಅವರು, 10.45ಕ್ಕೆ ರಸ್ತೆ ಮಾರ್ಗವಾಗಿ ಸುತ್ತೂರು ತಲುಪುವರು. ಸುತ್ತೂರು ಶ್ರೀಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ ಅಂಗವಾಗಿ ನಡೆಯುವ ಕೃಷಿ ವಿಚಾರಸಂಕಿರಣದಲ್ಲಿ ಪಾಲ್ಗೊಳ್ಳುವರು.

ಮಧ್ಯಾಹ್ನ 2.50ಕ್ಕೆ ತಿ.ನರಸೀಪುರ ತಾಲ್ಲೂಕು ಕುಪ್ಯ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿಯಿಂದ ಆಯೋಜಿಸಿರುವ ‘ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಸಮಾರಂಭ’ದಲ್ಲಿ ಭಾಗವಹಿಸುವರು. ಸಂಜೆ 4.50ಕ್ಕೆ ಮೈಸೂರು ತಲುಪುವರು. ಸಂಜೆ 7ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತೆರಳುವರು.

ADVERTISEMENT

ಮುಖ್ಯಮಂತ್ರಿಯೊಂದಿಗೆ ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಕೂಡ ಪ್ರವಾಸ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.