ADVERTISEMENT

ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಪ್ರವಾಸ ಇಂದಿನಿಂದ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2025, 6:04 IST
Last Updated 1 ಅಕ್ಟೋಬರ್ 2025, 6:04 IST
<div class="paragraphs"><p>ಸಿದ್ದರಾಮಯ್ಯ&nbsp;, ಮುಖ್ಯಮಂತ್ರಿ</p></div>

ಸಿದ್ದರಾಮಯ್ಯ , ಮುಖ್ಯಮಂತ್ರಿ

   

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ.1 ಹಾಗೂ 2ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಅ.1ರಂದು ಮಧ್ಯಾಹ್ನ 3.25ಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದು ವಾಸ್ತವ್ಯ ಹೂಡುವರು. 2ರಂದು ಬೆಳಿಗ್ಗೆ 8.30ಕ್ಕೆ ಗಾಂಧಿ ವೃತ್ತದಲ್ಲಿ ಗಾಂಧಿ ಜಯಂತಿ ಅಂಗವಾಗಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವರು. ಬೆಳಿಗ್ಗೆ 9ಕ್ಕೆ ಚಾಮುಂಡಿಬೆಟ್ಟದ ತಪ್ಪಲಿನ ಸುತ್ತೂರು  ಮಠಕ್ಕೆ ಭೇಟಿ ನೀಡುವರು.

ADVERTISEMENT

ಮಧ್ಯಾಹ್ನ1ಕ್ಕೆಅರಮನೆ ಆವರಣದಲ್ಲಿರುವ ಬಲರಾಮ ದ್ವಾರದಲ್ಲಿ ನಂದಿಧ್ವಜ ಪೂಜೆಯಲ್ಲಿ ಪಾಲ್ಗೊಳ್ಳುವರು. ಸಂಜೆ 4.42ಕ್ಕೆ ಅರಮನೆ ಒಳಾವರಣದಲ್ಲಿ ವಿಜಯದಶಮಿ ಮೆರವಣಿಗೆಯ ಉದ್ಘಾಟನೆ ನೆರವೇರಿಸುವರು. ಸಂಜೆ 7ಕ್ಕೆ ಬನ್ನಿಮಂಟಪ ಕವಾಯಿತು ಮೈದಾನದಲ್ಲಿ ಆಯೋಜಿಸಲಾಗಿರುವ ಪಂಜಿನ ಕವಾಯತು ಕಾರ್ಯಕ್ರಮದಲ್ಲಿ ರಾಜ್ಯಪಾಲರೊಂದಿಗೆ ಭಾಗವಹಿಸುವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.