ಮೈಸೂರು: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿಯಿಂದ ಜಿಲ್ಲೆಯ ಎಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ– ಉದ್ಘಾಟನೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿ ಹಾಗೂ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಮೇ 12ರಂದು ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 9ಕ್ಕೆ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆಯನ್ನು ಎಚ್.ಡಿ.ಕೋಟೆ ಪಟ್ಟಣದ ಅಂಬೇಡ್ಕರ್ ಭವನದಿಂದ ಸರ್ಕಾರಿ ಪಿಯು ಕಾಲೇಜು ಮೈದಾನದವರೆಗೆ ಆಯೋಜಿಸಲಾಗಿದೆ. ವೇದಿಕೆ ಕಾರ್ಯಕ್ರಮ ಬೆಳಿಗ್ಗೆ 10ಕ್ಕೆ ಸರ್ಕಾರಿ ಪಿಯು ಕಾಲೇಜು ಮೈದಾನದಲ್ಲಿ ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ಭಾಗವಹಿಸುವರು. ಶಾಸಕ ಅನಿಲ್ ಕುಮಾರ್ ಸಿ.ಅಧ್ಯಕ್ಷತೆ ವಹಿಸುವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.