ADVERTISEMENT

ಯಾವ ಅಕ್ರಮದಲ್ಲೂ ಭಾಗಿಯಾಗಿಲ್ಲ: ಡಾ.ಸಿ.ಎನ್‌. ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 8 ಜೂನ್ 2022, 3:49 IST
Last Updated 8 ಜೂನ್ 2022, 3:49 IST
ಡಾ.ಸಿ.ಎನ್. ಅಶ್ವತ್ಥನಾರಾಯಣ
ಡಾ.ಸಿ.ಎನ್. ಅಶ್ವತ್ಥನಾರಾಯಣ   

ಮೈಸೂರು: ‘ನಾನು ಯಾವುದೇ ನೇಮಕಾತಿ ಅಕ್ರಮಗಳಲ್ಲಿ ಶೇ 1ರಷ್ಟೂ ಭಾಗವಹಿಸಿಲ್ಲ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.

ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ನಡೆಯುತ್ತಿದ್ದು, ಯಾರೇ ತಪ್ಪು ಮಾಡಿದರೂ ಅವರ ವಿರುದ್ಧ ಕ್ರಮ ಖಚಿತ. ಅದರಲ್ಲಿ ಅವರು, ಇವರು ಅಂಥ ಏನೂ ಇಲ್ಲ. ಕಾಂಗ್ರೆಸ್ ಅಧಿಕಾರದ ಅವಧಿಯಲ್ಲೂ ಹಲವು ಹಗರಣಗಳು ನಡೆದಿದ್ದವು. ಭ್ರಷ್ಟ ಕಾಂಗ್ರೆಸ್‌ ಸರ್ಕಾರವು ಅಕ್ರಮದ ತನಿಖೆ ಮಾಡಿಸಿರಲಿಲ್ಲ. ಅವರದ್ದು ಭ್ರಷ್ಟಾಚಾರದ ಸಂಸ್ಕೃತಿ. ಈ ಬಗ್ಗೆ ಮಾತನಾಡಲು ಅವರಿಗೆ ಯಾವ ನೈತಿಕತೆ ಇದೆ’ ಎಂದು ಪ್ರಶ್ನಿಸಿದರು.

‘ಸಾಮಾನ್ಯ ವ್ಯಕ್ತಿ ನೀಡಿದ ದೂರಿಗೆ ಸ್ಪಂದಿಸಿದ ಗೃಹ ಸಚಿವರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಈ ವಿಚಾರದಲ್ಲಿ ಸಿದ್ದರಾಮಯ್ಯ ಈಗಲೂ ಕಡುಬು ತಿನ್ನುತ್ತಿದ್ದಾರೆ. ಈ ವಿಚಾರದ ಬಗ್ಗೆ ಮಾತನಾಡಿದರೆ ತಮ್ಮದು ಹೊರಗೆ ಬರುತ್ತದೆಂದು ಭಯದಲ್ಲಿದ್ದಾರೆ’ ಎಂದು ದೂರಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.