ADVERTISEMENT

ಪಠ್ಯೇತರ ಚಟುವಟಿಕೆಯಿಂದ ಕೌಶಲ: ಡಾ.ಸಿ.ಬಸವರಾಜು

​ಪ್ರಜಾವಾಣಿ ವಾರ್ತೆ
Published 30 ಜನವರಿ 2023, 12:56 IST
Last Updated 30 ಜನವರಿ 2023, 12:56 IST
ಮೈಸೂರಿನ ಶಾರದಾ ವಿಲಾಸ ಕಾನೂನು ಕಾಲೇಜಿನಲ್ಲಿ ನಡೆದ ವಾರ್ಷಿಕ ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಕಾನೂನು ವಿಶ್ವವಿದ್ಯಾಲಯದ ಡಾ.ಸಿ.ಬಸವರಾಜು ಮಾತನಾಡಿದರು
ಮೈಸೂರಿನ ಶಾರದಾ ವಿಲಾಸ ಕಾನೂನು ಕಾಲೇಜಿನಲ್ಲಿ ನಡೆದ ವಾರ್ಷಿಕ ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಕಾನೂನು ವಿಶ್ವವಿದ್ಯಾಲಯದ ಡಾ.ಸಿ.ಬಸವರಾಜು ಮಾತನಾಡಿದರು   

ಮೈಸೂರು: ‘ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ವೃತ್ತಿಪರತೆ ಮತ್ತು ಕೌಶಲ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ’ ಎಂದು ಕಾನೂನು ವಿಶ್ವವಿದ್ಯಾಲಯದ ಡಾ.ಸಿ.ಬಸವರಾಜು ತಿಳಿಸಿದರು.

ಇಲ್ಲಿನ ಶಾರದಾ ವಿಲಾಸ ಕಾನೂನು ಕಾಲೇಜಿನಲ್ಲಿ ಈಚೆಗೆ ನಡೆದ ವಾರ್ಷಿಕ ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

‘ಕ್ರೀಡೆಯು ದೈಹಿಕ ಮತ್ತು ಮಾನಸಿಕ ಸದೃಢತೆಯನ್ನು ಹೆಚ್ಚಿಸುತ್ತದೆ. ಹೀಗಾಗಿ, ಪಠ್ಯದ ಕಲಿಕೆಗೆ ಕೊಡುವಷ್ಟೇ ಮಹತ್ವವನ್ನು ಪಠ್ಯೇತರ ವಿಷಯಕ್ಕೂ ಕೊಡಬೇಕು’ ಎಂದು ಸಲಹೆ ನೀಡಿದರು.

ADVERTISEMENT

ನ್ಯಾಯಾಧೀಶರು ಹಾಗೂ ಸರ್ಕಾರಿ ಸಹಾಯಕ ಅಭಿಯೋಜಕರಾಗಿ ಆಯ್ಕೆಯಾಗಿರುವ ಕಾಲೇಜಿನ ಹಳೆಯ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ವಕೀಲ ಎಸ್.ಲೋಕೇಶ್ ಮಾತನಾಡಿದರು. ಶಾರದಾ ವಿಲಾಸ ವಿದ್ಯಾಸಂಸ್ಥೆಗಳ ಗೌರವ ಕಾರ್ಯದರ್ಶಿ ಎನ್.ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದ್ದರು.

ಪ್ರಾಂಶುಪಾಲೆ ವಾಣಿ ಸಿ., ಸಹಾಯಕ ಪ್ರಾಧ್ಯಾಪಕರಾದ ಸಪ್ನಾ ಎ.ಪಿ., ದಿಶಾ ಜಿ.ಮಾರಿಗೋಲಿ. ಗೀತಾ ಎಚ್‌.ಜೆ., ವಿಶಾಖ್ ಶ್ರೀವತ್ಸ ವೈ.ಪಿ. ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.