ADVERTISEMENT

ಹೊಂದಾಣಿಕೆ ಕೊರತೆಯೇ ಸೋಲಿಗೆ ಕಾರಣ

​ಪ್ರಜಾವಾಣಿ ವಾರ್ತೆ
Published 25 ಮೇ 2019, 20:01 IST
Last Updated 25 ಮೇ 2019, 20:01 IST

ಹುಣಸೂರು: ‘ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗೆ ಜೆಡಿಎಸ್‌ ಸಂ‍ಪೂರ್ಣ ಸಹಕಾರ ನೀಡಿದೆ. ಆದರೂ ಸ್ಥಳೀಯ ಕಾಂಗ್ರೆಸ್‌ ಮುಖಂಡರ ಹೊಂದಾಣಿಕೆಯ ಕೊರತೆ ಅಭ್ಯರ್ಥಿಯ ಸೋಲಿಗೆ ಕಾರಣವಾಗಿದೆ’ ಎಂದು ಜೆಡಿಎಸ್‌ ತಾಲ್ಲೂಕು ಘಟಕದ ಅಧ್ಯಕ್ಷ ಮಾದೇಗೌಡ ಹೇಳಿದರು.

ಹುಣಸೂರಿನಲ್ಲಿ ಮೈತ್ರಿ ಅಭ್ಯರ್ಥಿಗೆ 3,798 ಮತಗಳು ಅಂತರ ನೀಡಲಾಗಿದೆ. ಕಾಂಗ್ರೆಸ್ ಮುಖಂಡರು ಜೆಡಿಎಸ್‌ ಶಾಸಕರನ್ನು ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರೇ ಇನ್ನೂ ಹೆಚ್ಚಿನ ಅಂತರ ಪಡೆಯಬಹುದಿತ್ತು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜೆಡಿಎಸ್‌ ಮುಖಂಡ ಹರಿಹರ ಆನಂದಸ್ವಾಮಿ ಮಾತನಾಡಿ, ‘ಈ ಬಾರಿ ಯುವಕರು ಮೋದಿ ಮೋಹಕ್ಕೆ ಒಲವು ತೋರಿ ಜಾತ್ಯಾತೀತವಾಗಿ ಬೆಂಬಲಿದ್ದಾರೆ. ಆದ್ದರಿಂದ ಮೈತ್ರಿ ಅಭ್ಯರ್ಥಿಗೆ ಹಿನ್ನಡೆಯಾಗಿದೆ. ಇದನ್ನರಿತು ಪ್ರಧಾನಿ ನರೇಂದ್ರ ಮೋದಿ ಅವರು ಯುವ ಸಮೂಹಕ್ಕೆ ಉದ್ಯೋಗವಕಾಶವನ್ನು ಕಲ್ಪಿಸಬೇಕಿದೆ’ ಎಂದರು.

ADVERTISEMENT

ಸುದ್ದಿಗೋಷ್ಠಿಯಲ್ಲಿ ನಗರಸಭೆ ಮಾಜಿ ಸದಸ್ಯ ಸತೀಶ್‌ ಕುಮಾರ್‌, ಕುರುಬ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಕುನ್ನೇಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.