ಕರ್ನಾಟಕ ಲೋಕಾಯುಕ್ತ
(ಸಾಂಕೇತಿಕ ಚಿತ್ರ)
ಮೈಸೂರು: ‘ಮುಡಾ ಮಾಜಿ ಆಯುಕ್ತ ಡಿ.ಬಿ. ನಟೇಶ್ ಅವರು 50:50 ಅನುಪಾತದಲ್ಲಿ ನಿವೇಶನಗಳ ಹಂಚಿಕೆ ಮೂಲಕ ಅಕ್ರಮವಾಗಿ ಗಳಿಸಿದ ಹಣವನ್ನು ಪತ್ನಿ ರಶ್ಮಿ ಹೆಸರಿನಲ್ಲಿ ವಿವಿಧ ಕಂಪನಿಗಳಲ್ಲಿ ಹೂಡಿಕೆ ಮಾಡಿದ್ದು, ಆ ಬಗ್ಗೆ ತನಿಖೆ ನಡೆಸಬೇಕು’ ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಗುರುವಾರ ಇಲ್ಲಿನ ಲೋಕಾಯುಕ್ತ ಎಸ್.ಪಿ. ಕಚೇರಿಗೆ ದೂರು ಸಲ್ಲಿಸಿದರು.
‘ರಶ್ಮಿ ಅವರು ಬ್ಲೂಸ್ಟೋನ್, ವಿಪಾಸನ ಹೆಲ್ತ್ ಕೇರ್, ಅಕುನೋವ ಹೆಲ್ತ್ ಕೇರ್ ಎಂಬ ಕಂಪನಿಗಳಲ್ಲಿ ನಿರ್ದೇಶಕಿಯಾಗಿದ್ದಾರೆ. ಬ್ಲೂಸ್ಟೋನ್ ಸಂಸ್ಥೆಯು ಮೈಸೂರು ತಾಲ್ಲೂಕಿನ ಇಲವಾಲ ಹೋಬಳಿಯಲ್ಲಿ 2020ರಲ್ಲಿ ₹64.75 ಲಕ್ಷ ಮೊತ್ತಕ್ಕೆ 1 ಎಕರೆ 30 ಗುಂಟೆ ಜಮೀನು ಖರೀದಿಸಿದೆ. ಅದೇ ಸಂಸ್ಥೆಯ ಮೂಲಕ 2022ರಲ್ಲಿ ಮೈಸೂರು ನಗರದ ಬೋಗಾದಿಯಲ್ಲಿ ₹44.99 ಲಕ್ಷ ಮೌಲ್ಯದ ಫ್ಲ್ಯಾಟ್ ಖರೀದಿಸಲಾಗಿದೆ. ನಟೇಶ್ ಅವರೇ ಬೇನಾಮಿ ಹೆಸರಿನಲ್ಲಿ ಅಕ್ರಮ ಹೂಡಿಕೆ ಮಾಡಿರುವ ಸಾಧ್ಯತೆ ಇದ್ದು, ತನಿಖೆಗೆ ಒಳಪಡಿಸಬೇಕು’ ಎಂದು ದೂರಿನಲ್ಲಿ ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.