ADVERTISEMENT

ಪುನೀತ್‌ಗೆ ಪದ್ಮಶ್ರೀ ಪ್ರಶಸ್ತಿ ನೀಡಲು ಸರ್ವ ಸಮ್ಮತ ಒಪ್ಪಿಗೆ ಇದೆ: ಬೊಮ್ಮಾಯಿ

ಪುನೀತ್ ರಾಜ್‍ಕುಮಾರ್ ಎಲ್ಲ ಗೌರವಕ್ಕೆ ಅರ್ಹರು

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2021, 7:18 IST
Last Updated 2 ನವೆಂಬರ್ 2021, 7:18 IST
ಎಚ್ ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದ ಬಳಿಯಿರುವ ಕಬಿನಿ ಜಲಾಶಯಕ್ಕೆ ಅವರು ಬಾಗಿನ ಸಲ್ಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಎಚ್ ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದ ಬಳಿಯಿರುವ ಕಬಿನಿ ಜಲಾಶಯಕ್ಕೆ ಅವರು ಬಾಗಿನ ಸಲ್ಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ಮೈಸೂರು: ನಟ ಪುನೀತ್ ರಾಜ್‍ಕುಮಾರ್ ಪದ್ಮಶ್ರೀ ಸೇರಿದಂತೆ ಎಲ್ಲ ಗೌರವಕ್ಕೆ ಅರ್ಹರು.ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲು ಸರ್ವ ಸಮ್ಮತ ಒಪ್ಪಿಗೆ ಇದೆ. ಆದರೆ ನಿಯಮಗಳನ್ನು ಪರಿಶೀಲನೆ ಮಾಡಿ ನಂತರ ಪ್ರಸ್ತಾವ ಸಿದ್ದಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಮಗೂ ಪುನೀತ್ ರಾಜ್ ಕುಮಾರ್ ಬಗ್ಗೆ ಅಪಾರ ಗೌರವ ಇದೆ. ಎಲ್ಲವನ್ನು ಪರಿಶೀಲನೆ ಮಾಡುತ್ತೇವೆ ಎಂದರು.

ಎಚ್ ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದ ಬಳಿಯಿರುವ ಕಬಿನಿ ಜಲಾಶಯಕ್ಕೆ ಅವರು ಬಾಗಿನ ಸಲ್ಲಿಸಿದರು.

ADVERTISEMENT

ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲುವು ಸಾಧಿಸುತ್ತದೆ ಎಂದು‌ ವಿಶ್ವಾಸ ವ್ಯಕ್ತಪಡಿಸಿದರು.

ಬಾಗಿನ ಅರ್ಪಿಸುವ ಅಂಗಳಕ್ಕೆ ನುಗ್ಗಲು ಯತ್ನ
ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯ ಕಬಿನಿ ಜಲಾಶಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಿಸುವ ಅಂಗಳಕ್ಕೆ ಬಿಜೆಪಿಯ ಎಚ್‌.ಡಿ.ಕೋಟೆ ತಾಲ್ಲೂಕಿನ ಅಧ್ಯಕ್ಷ ಗುರುಸ್ವಾಮಿ ನುಗ್ಗಲು ಯತ್ನಿಸಿದರು.

ಈ ಸಂದರ್ಭ ಅವರನ್ನು ತಡೆದ ಪೊಲೀಸರು ಅತಿಥಿಗೃಹದಲ್ಲಿ ಭೇಟಿ ಮಾಡುವಂತೆ ಸೂಚಿಸಿದರು. ಹೀಗಾಗಿ,ಬಿಜೆಪಿ ಮುಖಂಡರಿಗೇಅವಕಾಶ ನೀಡಿಲ್ಲ ಎಂದು ಗುರುಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.