ಎಂ.ಬಿ. ಪಾಟೀಲ
– ಫೇಸ್‌ಬುಕ್ ಚಿತ್ರ
ಮೈಸೂರು: ‘ಜಾತಿಗಣತಿ ವರದಿ ಮುಂದಿನ ಸಚಿವ ಸಂಪುಟ ಸಭೆ ಮುಂದೆ ಚರ್ಚೆಗೆ ಬರಲಿದ್ದು, ಅದನ್ನು ತೆರೆದ ನಂತರವೇ ಸಾಧಕ, ಬಾಧಕಗಳು ಗೊತ್ತಾಗಲಿವೆ. ಅದಕ್ಕೂ ಮುನ್ನ ಮಾತನಾಡುವುದು ಸರಿಯಲ್ಲ’ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ವರದಿ ಜಾರಿಯಿಂದ ಯಾವುದೇ ಜಾತಿ ಸಮುದಾಯಕ್ಕೆ ಅನ್ಯಾಯವಾಗುವುದಿಲ್ಲವೆಂಬ ವಿಶ್ವಾಸವಿದೆ’ ಎಂದರು.
‘ಜಾತಿಗಣತಿಯಲ್ಲಿ ಲಿಂಗಾಯತ, ಒಕ್ಕಲಿಗ ಉಪ ಪಂಗಡಗಳನ್ನು ಅದೇ ಜಾತಿ ಅಡಿಯಲ್ಲಿ ಲೆಕ್ಕಕ್ಕೆ ತೆಗೆದುಕೊಳ್ಳಬೇಕೆಂದು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದು, ಕ್ರಮದ ಭರವಸೆ ನೀಡಿದ್ದಾರೆ’ ಎಂದು ಮಾಹಿತಿ ನೀಡಿದರು.
‘ಕೆಪಿಸಿಸಿ ಅಧ್ಯಕ್ಷ ಬದಲಾವಣೆಯಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ಮುಖ್ಯಮಂತ್ರಿ ಕುರ್ಚಿ ಖಾಲಿಯಿಲ್ಲ. ಹೀಗಾಗಿ ನಾನು ಆಕಾಂಕ್ಷಿ ಅಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.