ADVERTISEMENT

ಜೆಡಿಎಸ್‌–ಬಿಜೆಪಿ ಒಳ ಒಪ್ಪಂದ: ಸಿದ್ದರಾಮಯ್ಯ ಆರೋಪ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2021, 10:14 IST
Last Updated 27 ನವೆಂಬರ್ 2021, 10:14 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಮೈಸೂರು: ‘ಬಿಜೆಪಿ ಹಾಗೂ ಜೆಡಿಎಸ್‌ ನಡುವೆ ಒಳಒಪ್ಪಂದ ಇದ್ದೇ ಇದೆ. ಕುಮಾರಸ್ವಾಮಿ ಜೊತೆ ಚರ್ಚೆ ಮಾಡಿರುವುದಾಗಿ ಯಡಿಯೂರಪ್ಪ ಬಹಿರಂಗವಾಗಿಯೇ ಹೇಳಿದ್ದಾರೆ. ಈ ಚುನಾವಣೆ ಮಾತ್ರವಲ್ಲ; ಉಪಚುನಾವಣೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲೂ ಒಳಒಪ್ಪಂದ ಮಾಡಿಕೊಳ್ಳುತ್ತಾರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.

ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಯಾವ ಕ್ಷೇತ್ರದಲ್ಲೂ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ’ ಎಂದರು.

‘ಬೆಳಗಾವಿ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಲಖನ್‌ ಜಾರಕಿಹೊಳಿ ಇರುವುದು ಬಿಜೆಪಿಯಲ್ಲಿ. ಅವರು ಪಕ್ಷೇತರವಾಗಿ ಕಣಕ್ಕೆ ಇಳಿದಿರುವುದರಿಂದ ಬಿಜೆಪಿಯಲ್ಲಿ ಗೊಂದಲ ಉಂಟಾಗಿದೆ’ ಎಂದು ನುಡಿದರು.

ADVERTISEMENT

‘ಕೊಡಗಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇದೆ. ನಾವು ಕಳೆದ ಬಾರಿ ಅಲ್ಪ ಮತಗಳಿಂದ ಸೋತಿದ್ದೆವು. ಈ ಬಾರಿ ನಮ್ಮ ಅಭ್ಯರ್ಥಿ ಗೆಲ್ಲಿಸಲು ಎಲ್ಲಾ ಪ್ರಯತ್ನ ಮಾಡುತ್ತೇವೆ. ಎ.ಮಂಜು ಕಾಂಗ್ರೆಸ್‌ಗೆ ಬರುವುದಾಗಿ ಕೇಳಿಲ್ಲ. ಬಂದರೂ ಸೇರಿಸಿಕೊಳ್ಳುವುದಿಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.