ADVERTISEMENT

ಮೈಸೂರು | ಮುಖ್ಯಮಂತ್ರಿ ಅವಹೇಳನ: ದೂರು

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2025, 4:19 IST
Last Updated 31 ಆಗಸ್ಟ್ 2025, 4:19 IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಅರ್ಚಕರ ವಿರುದ್ಧ ಕಠಿಣ ಕ್ರಮವಹಿಸಬೇಕು ಎಂದು ಒತ್ತಾಯಿಸಿ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್‌ ಕಾನೂನು ಪ್ರಕೋಷ್ಠದ ಅಧ್ಯಕ್ಷ ಎ.ಆರ್‌.ಕಾಂತರಾಜ್‌ ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಅರ್ಚಕರ ವಿರುದ್ಧ ಕಠಿಣ ಕ್ರಮವಹಿಸಬೇಕು ಎಂದು ಒತ್ತಾಯಿಸಿ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್‌ ಕಾನೂನು ಪ್ರಕೋಷ್ಠದ ಅಧ್ಯಕ್ಷ ಎ.ಆರ್‌.ಕಾಂತರಾಜ್‌ ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದರು   

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಅರ್ಚಕರ ವಿರುದ್ಧ ಕಠಿಣ ಕ್ರಮವಹಿಸಬೇಕು ಎಂದು ಒತ್ತಾಯಿಸಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಹಾಗೂ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್‌ ಕಾನೂನು ಪ್ರಕೋಷ್ಠದ ಅಧ್ಯಕ್ಷ ಎ.ಆರ್‌.ಕಾಂತರಾಜ್‌ ನಗರ ಪೊಲೀಸ್‌ ಆಯುಕ್ತರಿಗೆ ಪ್ರತ್ಯೇಕವಾಗಿ ದೂರು ನೀಡಿದರು.

‘ಬೆಂಗಳೂರಿನಲ್ಲಿ ಪುರೋಹಿತರೊಬ್ಬರು ಖಾಸಗಿ ಸುದ್ದಿ ವಾಹಿನಿಗೆ ನಾಡಹಬ್ಬ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಿರುವ ಕುರಿತು ಮಾತನಾಡುತ್ತಾ ಮುಖ್ಯಮಂತ್ರಿಯನ್ನು ನಿಂದಿಸಿದ್ದಾರೆ. ರಾಜ್ಯದಲ್ಲಿ ಕೋಮು ಗಲಭೆ ಕಾರಣವಾಗುವಂತೆ ಮಾತನಾಡಿ ವೈಯಕ್ತಿಕ ತೇಜೋವಧೆ ಮಾಡಿರುವ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.

‘ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ವಕ್ತಾರ ಎಂ.ಜಿ.ಮೋಹನ್ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಗ್ಗೆ ಕೀಳು ಮಟ್ಟದ ಪದ ಬಳಕೆ ಮಾಡಿದ್ದಾರೆ. ಅವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕು. ಮುಖ್ಯಮಂತ್ರಿ ಬಗ್ಗೆ ಹಗುರವಾಗಿ ಮಾತನಾಡಿದರೆ ಕಾಂಗ್ರೆಸ್‌ ಕಾರ್ಯಕರ್ತರು ಸುಮ್ಮನೆ ಕೂರುವುದಿಲ್ಲ, ಪ್ರತಿಭಟಿಸುತ್ತೇವೆ’ ಎಂದು ಎಂ.ಲಕ್ಷ್ಮಣ್‌ ಎಚ್ಚರಿಕೆ ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.