ADVERTISEMENT

ಸಿದ್ದರಾಮಯ್ಯ ಬಗ್ಗೆ ಸಿ.ಟಿ.ರವಿ ಹೇಳಿಕೆಗೆ ಕಾಂಗ್ರೆಸ್ ಖಂಡನೆ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2022, 11:26 IST
Last Updated 15 ಸೆಪ್ಟೆಂಬರ್ 2022, 11:26 IST
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ   

ಮೈಸೂರು: ‘ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ತೀವ್ರವಾಗಿ ಖಂಡಿಸುತ್ತೇವೆ’ ಎಂದು ಕಾಂಗ್ರೆಸ್ ನಗರ ಸಮಿತಿ ವಕ್ತಾರ ಎಸ್.ರಾಜೇಶ್‌ ತಿಳಿಸಿದರು.

‘ಮಾಜಿ ಮುಖ್ಯಮಂತ್ರಿ, ಸಾಮಾಜಿಕ ನ್ಯಾಯದ ಪ್ರತಿಪಾದಕ ಹಾಗೂ ಮುತ್ಸದ್ದಿಯಾದ ಸಿದ್ದರಾಮಯ್ಯ ಅವರನ್ನು ಅವಹೇಳನ ಮಾಡಿರುವುದು ಸರಿಯಲ್ಲ. ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳುವುದಕ್ಕಾಗಿ ನಮ್ಮ ಪಕ್ಷದ ನಾಯಕರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ’ ಎಂದು ಟೀಕಿಸಿದರು.

‘ರವಿ, ಇದೇ ಧೋರಣೆ ಮುಂದುವರಿಸಿದರೆ ಅವರು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಾಗ ಕಪ್ಪುಪಟ್ಟಿ ಪ್ರದರ್ಶಿಸಿ ಪ್ರತಿಭಟನೆ ನಡೆಸಬೇಕಾಗುತ್ತದೆ’ ಎಂದು ತಿಳಿಸಿದರು.

ADVERTISEMENT

ಪಕ್ಷದ ಅಜೀಜ್‌ಸೇಠ್‌ ಬ್ಲಾಕ್‌ ಅಧ್ಯಕ್ಷ ಸೈಯದ್ ಎಕ್ಬಾಲ್, ಮುಖಂಡರಾದ ಕುರುಬಾರಹಳ್ಳಿ ಪ್ರಕಾಶ್, ರಾಕೇಶ್‌ಕುಮಾರ್‌ ಹಾಗೂ ದೀಪು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.