ADVERTISEMENT

‘ಬಿಜೆ‍ಪಿ ಸರ್ಕಾರ ಕಿತ್ತೊಗೆಯಲು ಹೋರಾಟ‘

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2022, 15:40 IST
Last Updated 10 ಆಗಸ್ಟ್ 2022, 15:40 IST
ಕೃಷ್ಣರಾಜ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಬುಧವಾರ ಹಮ್ಮಿಕೊಂಡಿದ್ದ ಪಾದಯಾತ್ರೆಯಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು
ಕೃಷ್ಣರಾಜ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಬುಧವಾರ ಹಮ್ಮಿಕೊಂಡಿದ್ದ ಪಾದಯಾತ್ರೆಯಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು   

ಮೈಸೂರು: ‘ದೇಶದಲ್ಲಿ ಬಿಜೆಪಿ ಸರ್ಕಾರಗಳನ್ನು ಕಿತ್ತೊಗೆದು, ಮತ್ತೊಮ್ಮೆ ಸ್ವಾತಂತ್ರ್ಯ ಹೋರಾಟಕ್ಕೆ ಇಳಿಯಬೇಕಾದ ಅನಿವಾರ್ಯತೆ ಬಂದಿದೆ’ ಎಂದು ಕಾಂಗ್ರೆಸ್ ಮುಖಂಡ ಎಂ.ಕೆ.ಸೋಮಶೇಖರ್ ಹೇಳಿದರು.

ಕೃಷ್ಣರಾಜ ವಿಧಾನಸಭಾ ಕ್ಷೇತ್ರದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಕಾಂಗ್ರೆಸ್ ಪಕ್ಷದಿಂದ ಬುಧವಾರ ಆಯೋಜಿಸಿದ್ದ ‘ಸ್ವಾತಂತ್ರ್ಯ ನಡಿಗೆ’ ಕಾರ್ಯಕ್ರಮಕ್ಕೆ ನಗರದ ವಿವೇಕಾನಂದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಚಾಲನೆ ನೀಡಿ ಮಾತನಾಡಿದರು.

‘ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಬಂದ ನಂತರ, ದೇಶ ಆರ್ಥಿಕವಾಗಿ ದಿವಾಳಿಯಾಗಿದೆ. ಶ್ರೀಮಂತರಿಗೆ ರಾಷ್ಟ್ರದ ಸಂಪತ್ತನ್ನೆಲ್ಲ ಮಾರುವಂತಹ ವ್ಯವಸ್ಥೆಯನ್ನು ಈ ಸರ್ಕಾರ ಸೃಷ್ಟಿಸಿದೆ. ಮುಖ್ಯಮಂತ್ರಿ ಆದಿಯಾಗಿ ಸಚಿವರು ಜನರ ನೋವುಗಳಿಗೆ ಸ್ಪಂದಿಸುತ್ತಿಲ್ಲ. ಬಡವರು ಬಹಳ ಸಂಕಷ್ಟದಲ್ಲಿದ್ದಾರೆ’ ಎಂದು ಆರೋಪಿಸಿದರು.

ADVERTISEMENT

ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್, ಕೆಪಿಸಿಸಿ ಕಾರ್ಯದರ್ಶಿ ಚಂದ್ರಮೌಳಿ ಮಾತನಾಡಿದರು.

ಪಕ್ಷದ ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ, ಮುಖಂಡರಾದ ವಾಸು, ಹರೀಶ್ ಗೌಡ, ವೀಣಾ, ಭಾಸ್ಕರ್, ಶ್ರೀನಾಥ್ ಬಾಬು, ಡಾ.ಸುಜಾತರಾವ್, ಭಾಸ್ಕರ್ ಎಲ್ ಗೌಡ, ಕುಮಾರ್ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಿ.ಸೋಮಶೇಖರ್, ಶ್ರೀಧರ್, ಭವ್ಯಾ, ವಿದ್ಯಾ, ಪ್ರಧಾನ ಕಾರ್ಯದರ್ಶಿ ಎಂ.ಶಿವಣ್ಣ, ಪಾಲಿಕೆ ಸದಸ್ಯರಾದ ಜೆ.ಗೋಪಿ, ಶೋಭಾ ಸುನೀಲ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.