ADVERTISEMENT

ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ: ತಿ.ನರಸೀಪುರ ಬಂದ್‌ಗೆ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2024, 14:30 IST
Last Updated 17 ಆಗಸ್ಟ್ 2024, 14:30 IST
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರು ಹಾಗೂ ವಿರೋಧ ಪಕ್ಷಗಳ ವಿರುದ್ಧ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ತಿ.ನರಸೀಪುರ ಪಟ್ಟಣದಲ್ಲಿ ಶನಿವಾರ ಮಧ್ಯಾಹ್ನ ಪ್ರತಿಭಟನೆ ನಡೆಸಿದರು
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರು ಹಾಗೂ ವಿರೋಧ ಪಕ್ಷಗಳ ವಿರುದ್ಧ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ತಿ.ನರಸೀಪುರ ಪಟ್ಟಣದಲ್ಲಿ ಶನಿವಾರ ಮಧ್ಯಾಹ್ನ ಪ್ರತಿಭಟನೆ ನಡೆಸಿದರು   

ತಿ.ನರಸೀಪುರ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿ (ಪ್ರಾಸಿಕ್ಯೂಷನ್‌) ನೀಡಿರುವ ರಾಜ್ಯಪಾಲರ ಕ್ರಮ ಖಂಡಿಸಿ ತಿ.ನರಸೀಪುರ ಪಟ್ಟಣ ಸೇರಿದಂತೆ ಜಿಲ್ಲೆಯ ವಿವಿಧೆಡೆ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಸಿದೆ.

ತಿ.ನರಸೀಪುರ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಶನಿವಾರ ಮಧ್ಯಾಹ್ನ ಪ್ರತಿಭಟನೆ ನಡೆಸಿದರು. ಪಟ್ಟಣದ ವಿದ್ಯೋದಯ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಕಾರರು, ‘ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿರುವ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವುದು ರಾಜಕೀಯ ಸೇಡಿನ ಕ್ರಮ’ ಎಂದು ಆರೋಪಿಸಿದರು.

ಜೆಡಿಎಸ್- ಬಿಜೆಪಿ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪಟ್ಟಣದ ವಿದ್ಯೋದಯ ಕಾಲೇಜು ವೃತ್ತದಿಂದ ಖಾಸಗಿ ಬಸ್ ನಿಲ್ದಾಣದವರೆವಿಗೂ ಪ್ರತಿಭಟನೆ ಮೆರವಣಿಗೆ ನಡೆಸಿದರು.

ADVERTISEMENT

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ದೊಡ್ಡೇಬಾಗಿಲು ಮಲ್ಲಿಕಾರ್ಜುನಸ್ವಾಮಿ, ಎಂ.ರಮೇಶ್, ಬ್ಲಾಕ್ ಅಧ್ಯಕ್ಷ ರಮೇಶ್ ಮುದ್ದೇಗೌಡ, ಅನಿಲ್ ಕುಮಾರ್, ಕುಪ್ಯ ಭಾಗ್ಯಮ್ಮ, ಅಮ್ಜದ್ ಖಾನ್, ಉಕ್ಕಲಗೆರೆ ಬಸವಣ್ಣ, ಕೆ.ಮಹದೇವ್, ಪುರಸಭಾ ಸದಸ್ಯರಾದ ಬಾದಾಮಿ ಮಂಜು, ಟಿ.ಎಂ. ನಂಜುಂಡಸ್ವಾಮಿ, ಹೆಳವರಹುಂಡಿ ಸೋಮು, ತುಂಬಲ ಪ್ರಕಾಶ್, ಗುರುಸ್ವಾಮಿ, ಹೊಸಪುರ ಮಲ್ಲು, ಮಾದೇಶ್, ಕೊತ್ತೇಗಾಲ ಬಸವರಾಜು, ಅಮಾಸೆ ಲಿಂಗರಾಜು, ಕೆ.ಎಸ್. ಗಣೇಶ್ ಸಲೀಂ, ಮಿಥುನ್, ಮುದ್ದುಬೀರನಹುಂಡಿ ಶ್ರೀಕಂಠ, ಸಂಜು, ಲತಾ ಜಗದೀಶ್, ವೆಂಕಟೇಶ್, ಅಂದಾನಿ, ಹಾಲೇಗೌಡ, ರಾಘವೇಂದ್ರ, ಲಕ್ಷ್ಮಣ, ಸಂತೋಷ್, ಮಂಟೆಲಿಂಗಯ್ಯ, ಹೆಳವರಹುಂಡಿ ಅರುಣ್, ಶೇಖರ್ ಪಾಲ್ಗೊಂಡಿದ್ದರು.

‘ರಾಜಕೀಯ ದ್ವೇಷದಿಂದ ಕ್ರಮ’

ಮುಖ್ಯಮಂತ್ರಿ ಮೇಲಿನ ಪ್ರಾಸಿಕ್ಯೂಷನ್‌ಗೆ ಖಂಡಿಸಿ ಸೋಮವಾರ ತಿ. ನರಸೀಪುರ ಬಂದ್ ಮಾಡಲು ಕಾಂಗ್ರೆಸ್ ಮುಖಂಡರು ನಿರ್ಧರಿಸಿದರು. ಪಟ್ಟಣದ ಕೊಳ್ಳೇಗಾಲ ಮುಖ್ಯ ರಸ್ತೆಯಲ್ಲಿರುವ ಪಕ್ಷದ ಕಚೇರಿಯಲ್ಲಿ ಸಭೆ ಸೇರಿದ ಮುಖಂಡರು ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ ತಮ್ಮ ಪಾತ್ರವಿಲ್ಲ ಎಂದು ಅನೇಕ ಬಾರಿ ಸ್ಪಷ್ಟಪಡಿಸಿದ್ದರೂ ಅವರ ಮೇಲೆ ರಾಜಕೀಯ ದ್ವೇಷದಿಂದ ಈ ಕ್ರಮ ಕೈಗೊಂಡಿದ್ದಾರೆ’ ಎಂದು ಆರೋಪಿಸಿ ರಾಜ್ಯಪಾಲರ ನಡೆಯನ್ನು ಖಂಡಿಸಿದರು. ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಎಂ.ಡಿ. ಬಸವರಾಜು ಮಾತನಾಡಿ ‘ಸುದೀರ್ಘ ರಾಜಕಾರಣದಲ್ಲಿ ಕಳಂಕರಹಿತವಾಗಿ ರಾಜಕಾರಣ ಮಾಡಿಕೊಂಡು ಬಂದಿರುವ ಸಿದ್ದರಾಮಯ್ಯ ಅವರ ಆಡಳಿತ ಮೆಚ್ಚುಗೆಯನ್ನು ಸಹಿಸದೇ ಅವರನ್ನು ವಿನಾಕಾರಣ ಪ್ರಕರಣದಲ್ಲಿ ಸಿಲುಕಿಸುವ ಹುನ್ನಾರ ನಡೆದಿದೆ. ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ವಿರೋಧ ಪಕ್ಷಗಳು ಪಾದಯಾತ್ರೆ ನೆಪದಲ್ಲಿ ಕೇಂದ್ರ ಸರ್ಕಾರದ ಮೂಲಕ ರಾಜ್ಯಪಾಲರ ಮೇಲೆ ಒತ್ತಡ ಹೇರಿದ್ದಾರೆ’ ಎಂದು ಆರೋಪಿಸಿದರು ಬಿ.ಮರಯ್ಯ ಟಿ.ಎಸ್. ಪ್ರಶಾಂತ್ ಬಾಬು ಸೇರಿದಂತೆ ಮುಖಂಡರು ಕಾರ್ಯಕರ್ತರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.