ADVERTISEMENT

ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಕಾಯ್ದೆ ತಿದ್ದುಪಡಿ ಹಿಂಪಡೆಯಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2020, 4:21 IST
Last Updated 3 ಅಕ್ಟೋಬರ್ 2020, 4:21 IST
ಪಿರಿಯಾಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಪಟ್ಟಣದ ಬೆಟ್ಟದಪುರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದರು
ಪಿರಿಯಾಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಪಟ್ಟಣದ ಬೆಟ್ಟದಪುರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದರು   

ಪಿರಿಯಾಪಟ್ಟಣ: ಬಿಜೆಪಿ ಸರ್ಕಾರವು ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಪಕ್ಷ ವತಿಯಿಂದ ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಶಾಸಕ ಕೆ.ವೆಂಕಟೇಶ್ ಮಾತನಾಡಿ, ‘ಭೂ ಸುಧಾರಣಾ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ಸೇರಿದಂತೆ ರೈತ ವಿರೋಧಿ ಕಾಯ್ದೆಗಳನ್ನು ಜಾರಿ ಮಾಡಿರುವ ಬಿಜೆಪಿ ಸರ್ಕಾರ ರೈತ ದ್ರೋಹಿಯಂತೆ ವರ್ತಿಸುತ್ತಿದೆ’ ಎಂದು ಆರೋಪಿಸಿದರು.

ಕಾಯ್ದೆಗಳನ್ನು ಹಿಂಪಡೆಯುವವರೆಗೂ ಕಾಂಗ್ರೆಸ್ ಹೋರಾಟ ಮುಂದುವರಿಯಲಿದೆ ಎಂದರು.

ADVERTISEMENT

ಪ್ರತಿಭಟನೆಗೂ ಮುನ್ನ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರು ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹಾದ್ದೂರ ಶಾಸ್ತ್ರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ಬಸವೇಶ್ವರ ವೃತ್ತದ ಬಳಿ ಮಾನವ ಸರಪಳಿ ರಚಿಸುವ ಮೂಲಕ ಕೆಲಕಾಲ ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ನಂತರ ತಾಲ್ಲೂಕು ಕಚೇರಿಗೆ ಮೆರವಣಿಗೆಯಲ್ಲಿ ತೆರಳಿ ತಹಶೀಲ್ದಾರ್ ಶಕೀಾಬಾನು ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಹಮತ್ ಜಾನ್ ಬಾಬು, ಡಿ.ಟಿ.ಸ್ವಾಮಿ, ವೀಕ್ಷಕರಾದ ಮಂಜುನಾಥ್ ಗುಂಡೂರಾವ್, ತಾ.ಪಂ. ಅಧ್ಯಕ್ಷೆ ಕೆ.ಆರ್.ನಿರೂಪಾ, ಸದಸ್ಯರಾದ ಕುಂಜಪ್ಪ ಕಾರ್ನಾಡ್, ಶ್ರೀನಿವಾಸ್, ಪುರಸಭಾ ಸದಸ್ಯರಾದ ಎಚ್.ಕೆ.ಮಂಜುನಾಥ್, ರವಿ, ಮುಖಂಡರಾದ ಬಿ.ಜೆ.ಬಸವರಾಜ್, ಪಿ.ಎಸ್. ವಿಷಕಂಠಯ್ಯ, ನಾಗಣ್ಣ, ಸರಸ್ವತಿ, ಪಿ.ಪಿ.ಮಹದೇವ್, ಪಿ.ಎಸ್.ಹರೀಶ್, ಪರಮೇಶ್, ಲಕ್ಷ್ಮೇಗೌಡ, ಸೀಗೂರು ವಿಜಯಕುಮಾರ್, ತಮ್ಮಣ್ಣಯ್ಯ, ಶೇಖರ್, ಪುಟ್ಟರಾಜು, ಜಯಶಂಕರ್, ಅನಿಲ್ ಕುಮಾರ್ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.