ಮೈಸೂರು: ಯುವ ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ ಜಲದರ್ಶಿನಿಯಲ್ಲಿನ ಸಂಸದ ಪ್ರತಾಪ ಸಿಂಹ ಕಚೇರಿಗೆ ಮುತ್ತಿಗೆ ಹಾಕಲು ಬುಧವಾರ ಯತ್ನಿಸಿದರು.
ರಾಜ್ಯಕ್ಕೆ ಅಕ್ಕಿ ನೀಡುವಂತೆ ಕೇಂದ್ರವನ್ನು ಒತ್ತಾಯಿಸದ ಸಂಸದರಿಗೆ ಧಿಕ್ಕಾರ, ಪೇಪರ್ ಸಿಂಹ ಅಕ್ಕಿ ಕೊಡ್ರಪ್ಪ ಎಂದು ಘೋಷಣೆ ಕೂಗಿದರು.
ಪೊಲೀಸರು ಮಧ್ಯ ಪ್ರವೇಶಿಸಿ, ಕಾಂಗ್ರೆಸ್ ಕಾರ್ಯಕರ್ತರು ಒಳ ಹೋಗದಂತೆ ತಡೆದರು. ನಂತರ ಗೇಟಿನ ಮುಂಭಾಗ ಪ್ರತಿಭಟನೆ ನಡೆಯಿತು.
ಈ ಸಂದರ್ಭ ಸಂಸದ ಪ್ರತಾಪ ಸಿಂಹ ಕಚೇರಿಯ ಒಳಗೇ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.